ಮಾಸ್ಕ್ ಮರೆತು ಹೊರಬರುವವರ ವಿರುದ್ಧ ಇನ್ನು ಮುಂದೆ ದಾಖಲಾಗಲಿದೆ ಎಫ್ಐಆರ್!

ಮಾಸ್ಕ್ ಧರಿಸದೆ ಹೊರಬಂದು ನಿಯಮ ಉಲ್ಲಂಘಿಸುವವರಿಗೆ ಇನ್ನು ಮುಂದೆ ದಂಡ ವಿಧಿಸಿ ಮನೆಗೆ ಕಳುಹಿಸುವುದಿಲ್ಲ. ಬದಲಾಗಿ ಅಧಿಕಾರಿಗಳು ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾಸ್ಕ್ ಧರಿಸದೆ ಹೊರಬಂದು ನಿಯಮ ಉಲ್ಲಂಘಿಸುವವರಿಗೆ ಇನ್ನು ಮುಂದೆ ದಂಡ ವಿಧಿಸಿ ಮನೆಗೆ ಕಳುಹಿಸುವುದಿಲ್ಲ. ಬದಲಾಗಿ ಅಧಿಕಾರಿಗಳು ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. 

ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಈ ನಿರ್ಧಾರವನ್ನು ಕೈಗೊಂಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಗೊಳ್ಳಲು ಮುಂದಾಗಿದ್ದಾರೆ. 

ಈಗಾಗಲೇ ಜನರಿಗೆ ವೈರಸ್ ಕುರಿತು ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಇದೀಗ ನಮಗೆ ನಿಯಮದ ಬಗ್ಗೆ ಗೊತ್ತಿಲ್ಲ ಎಂದು ಜನರು ಹೇಳುವಂತಿಲ್ಲ. ನಿಯಮ ಉಲ್ಲಂಘಿಸುವವರಿಗೆ ಕ್ಷಮೆ ಇಲ್ಲ. ನಿಯಮಮ ಉಲ್ಲಂಘಿಸುವವರ ಮೇಲೆ ಮೃದು ಧೋರಣೆ ಇರುವುದಿಲ್ಲ. ನೇರವಾಗಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಿರಿಯ ಆರೋಗ್ಯಾಧಿಕಾರಿ ಹೇಳಿದ್ದಾರೆ. 

ಕರ್ನಲ್ ರಾಜ್ಬೀರ್ ಸಿಂಗ್ ಅವರು ಮಾತನಾಡಿ, ಕಳೆದ ಎರಡು ದಿನಗಳಿಂದ ಎರಡು ಎಫ್ಐಆರ್ ಗಳನ್ನು ದಾಖಲು ಮಾಡಲಾಗಿದೆ. ದಾಸರಹಳ್ಳಇ ಹಾಗೂ ಬೊಮ್ಮನಹಳ್ಳಿಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ. 

ನಗರದ 61 ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆಗಳಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಮಾರ್ಷಲ್‌ಗಳೊಂದಿಗೆ ಕೆಲಸ ಮಾಡಲಿದ್ದು, ಮಾಸ್ಕ್ ಧರಿಸಿದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ಸೆರೆಹಿಡಿಯುವ ಕಾರ್ಯ ಮಾಡಲಿದ್ದಾರೆ. ಕೆಲ ಪ್ರದೇಶಗಳಲ್ಲಿ ಎಸ್ಐ, ಇನ್ಸ್ ಪೆಕ್ಟರ್ ಗಳು ಹಾಗೂ ಡಿಸಿಪಿಗಳೂ ಕೂಡ ಮಾರ್ಷಲ್ ಗಳೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ. 

ಎಲ್ಲರ ಮೇಲೂ ಎಫ್ಐಆರ್ ದಾಖಲಿಸುವುದು ನಮಗಿಷ್ಟವಿಲ್ಲ. ಆದರೆ, ಮಾರ್ಷಲ್ ಗಳೊಂದಿಗೆ ಕೆಟ್ಟದಾಗಿ ವರ್ತಿಸುವವರ, ನಿಂದಿಸುವವರ ಹಾಗೂ ವಾದ, ಹಲ್ಲೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ನಿನ್ನೆಯಷ್ಟೇ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದರನ್ನು ಹಾಕಿದ್ದರು. ನಿಯಮ ಉಲ್ಲಂಘಿಸುವ ವಾಣಿಜ್ಯ ಕಟ್ಟಗಳ ಮೇಲೆ ದಾಳಿ ಮಾಡಿ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com