

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಜೂ.29ರಂದು ಸೈಕಲ್ ಚಳವಳಿ ನಡೆಸಲು ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಹಿರಿಯ ನಾಯಕ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಜೂ.29ರಂದು ನಾನು ಮತ್ತು ಸಿದ್ದರಾಮಯ್ಯ ಅವರನ್ನೊಳಗೊಂಡು ಕಾಂಗ್ರೆಸ್, ಮುಖಂಡರು, ಕಾರ್ಯಕರ್ತು ಸೈಕಲ್ ನಲ್ಲಿ ಆಗಮಿಸಿ ಕೇಂದ್ರ ಅಂಚೆ ಕಚೇರಿ ವೃತ್ತದ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಇದಲ್ಲದೆ, ಕೋವಿಡ್-19ರ ನಿಯಂತ್ರಣ ವೈಫಲ್ಯ, ಎಪಿಎಂಸಿ ಹಾಗೂ ಭೂ ಕಾಯ್ದೆ ತಿದ್ದುಪಡಿ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್ ಹೋರಾಟ ನಡೆಸಲಿದೆ. ರಾಜ್ಯಮಟ್ಟದಿಂದ ಗ್ರಾಮ ಪಂಚಾಯತ್ ಮಟ್ಟದವರೆಗೂ ವಿವಿಧ ಹಂತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದ್ದಾರೆ.