

ಬೆಂಗಳೂರು: ಕೋವಿಡ್-19 ಅಥವಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಆದೇಶವನ್ನು ಪಾಲಿಸದಿರುವ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಜನರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ವಿಧಿಸಲಾಗುತ್ತದೆ ಹಾಗೂ ಇತರೆ ರಾಜ್ಯಗಳಿಂದ ಬರುವ ಜನರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಲಾಗುತ್ತದೆ ಎಂದು ಹೇಳಿದೆ.