ಖಾಸಗಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳ ಕೋವಿಡ್ ವ್ಯವಸ್ಥೆಯ ಕಣ್ಗಾವಲಿಗೆ ಕಾರ್ಯತಂಡ ರಚನೆ

ಕೋವಿಡ್-19 ನಿಯಂತ್ರಣಕ್ಕಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕು ತಡೆಯುವ ವ್ಯವಸ್ಥೆಯ ಮೇಲೆ ಕಣ್ಗಾವಲು ಇಡಲು ಎರಡು ಹೊಸ ಕಾರ್ಯತಂಡಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕೋವಿಡ್-19 ನಿಯಂತ್ರಣಕ್ಕಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕು ತಡೆಯುವ ವ್ಯವಸ್ಥೆಯ ಮೇಲೆ ಕಣ್ಗಾವಲು ಇಡಲು ಎರಡು ಹೊಸ ಕಾರ್ಯತಂಡಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ವೈದ್ಯಕೀಯ  ಕಾಲೇಜುಗಳಿಗೆ ಜೋಡಿಸಲಾಗಿರುವ ಆಸ್ಪತ್ರೆಗಳಲ್ಲಿನ ವ್ಯವಸ್ಥೆ ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ ವ್ಯವಸ್ಥೆ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್‌ ನೇತೃತ್ವದ ಸಮಿತಿ ರಚಿಸಲಾಗಿದೆ. 

ತಂಡದಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಉಪಕುಲಪತಿ ಡಾ.ಸಚ್ಚಿದಾನಂದ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ್‌, ಆಯುಷ್‌ ಇಲಾಖೆ ಆಯುಕ್ತ ಮೀನಾಕ್ಷಿ ನೇಗಿ ಸದಸ್ಯರಾಗಿರಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com