ಬೆಂಗಳೂರು: ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದ ಪತಿ, ಆರೋಪಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಕತ್ತು ಕೊಯ್ದು ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದಾಪುರದ ಬನಹಳ್ಳಿ ಎಂಬಲ್ಲಿ ನಡೆದಿದೆ.
ಬೆಂಗಳೂರು: ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದ ಪತಿ, ಆರೋಪಿ ಬಂಧನ
Updated on: 

ಬೆಂಗಳೂರು:  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಕತ್ತು ಕೊಯ್ದು ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದಾಪುರದ ಬನಹಳ್ಳಿ ಎಂಬಲ್ಲಿ ನಡೆದಿದೆ.

ಗೌರಿಬಿದನೂರು ತಾಲೂಕಿನ ತೊಂಡೆಬಾವಿಯ ಯೋಗಶ್ರೀ ಕೊಲೆಯಾದವರು. ಕೃತ್ಯ ವೆಸಗಿದ ಪರಾರಿಯಾಗಿದ್ದ ಪತಿ ಮಾಲೂರು ತಾಲೂಕಿನ ಕಡೂರು ಮೂಲದ ಅರುಣ್ ನನ್ನು ಸೂರ್ಯನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅರುಣ್ ಹಾಗೂ ಯೋಗಶ್ರೀ ಕೆಲವು ವರ್ಷಗಳ ಹಿಂದೆ ವಿವಾಹವಾಗಿದ್ದು ಇಪ್ಪತ್ತು ದಿನಗಳ ಹಿಂದೆಯಷ್ಟೆ ಚಂದಾಪುರದ ಬನಹಳ್ಳಿಯ ಬಾಡಿಗೆ ಮನೆಗೆ ಬಂದಿದ್ದರು. ಆನೇಕಲ್ ತಾಲೂಕಿನ ಸಮಂದೂರು ಗ್ರಾಮದ ತೋಟವೊಂದರಲ್ಲಿ ದಂಪತಿ ಕೆಲಸಕ್ಕೆ ಹೋಗುತ್ತಿದ್ದರು.

ದಂಪತಿ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಿನ್ನೆ ರಾತ್ರಿ ಆರಂಭವಾದ ಗಲಾಟೆ ವಿಕೋಪಕ್ಕೆ ಹೋಗಿ ಆರೋಪಿ ಅರುಣ್ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಸುದ್ದಿ ತಿಳಿದ ತಕ್ಷಣ ಸೂರ್ಯನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಪ್ರಕರಣ ದಾಖಲಿಸಿ ಆರೋಪಿ ಅರುಣ್‍ನನ್ನು ಬಂಧಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com