ಮಲೆ ಮಹದೇಶ್ವರ ಬೆಟ್ಟ
ಮಲೆ ಮಹದೇಶ್ವರ ಬೆಟ್ಟ

ಚಾಮರಾಜನಗರ: ಫೆಬ್ರವರಿಯಲ್ಲಿ ಮಾದಪ್ಪನ ಹುಂಡಿಯಲ್ಲಿ 2.52 ಕೋಟಿ ರೂ ಸಂಗ್ರಹ

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಫೆಬ್ರವರಿಯಲ್ಲಿ 2.52 ಕೋಟಿ ರೂಪಾಯಿ ಸಂಗ್ರಹವಾಗಿದೆ.
Published on

ಚಾಮರಾಜನಗರ: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಫೆಬ್ರವರಿಯಲ್ಲಿ 2.52 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಹಣ ಎಣಿಕೆಯಲ್ಲಿ ಫೆಬ್ರವರಿ ತಿಂಗಳ ಅವಧಿಯಲ್ಲಿ ದಾಖಲೆಯ 2.52 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಈ ಬಾರಿ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಐದು ದಿನಗಳ ಕಾಲ ನಡೆದ ಶಿವರಾತ್ರಿ ಜಾತ್ರಾ ಮಹೋತ್ಸವದ ವಿಶೇಷ ಸಂದರ್ಭದಲ್ಲಿ ರಾಜ್ಯ ಮತ್ತು ಹೊರರಾಜ್ಯಗಳಿಂದ ಭಕ್ತರು ಮಹದೇಶ್ವರಬೆಟ್ಟಕ್ಕೆ ಭೇಟಿ ನೀಡಿದ್ದು, ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಸಮರ್ಪಿಸಿದ್ದಾರೆ.

ನಗದು ಜತೆಗೆ ೫೦ ಗ್ರಾಂ ಚಿನ್ನ ಹಾಗೂ ಎರಡೂವರೆ ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೨ ಕೋಟಿ ೧೩ ಲಕ್ಷ ೯೩ ಸಾವಿರದ ೩೩೪ ರೂಪಾಯಿ ಹಣ ಸಂಗ್ರಹಗೊಂಡಿತ್ತು. ಈ ಬಾರಿ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ೧೦ ಲಕ್ಷಕ್ಕೂ ಹೆಚ್ಚು ಭಕ್ತರು ಮಾದಪ್ಪನ ದರ್ಶನ ಪಡೆದಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com