ಎಚ್ ಡಿಕೆಗೆ ಬಿಎಸ್ ವೈ ಶಾಕ್: ಕುಮಾರಣ್ಣನ ಬಡವರ ಬಂಧು ಯೋಜನೆಗೆ ಕತ್ತರಿ?

ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೂ ಕತ್ತರಿ ಬೀಳುವ ಸಾಧ್ಯತೆ ಇದೆ.ಕುಮಾರಣ್ಣನ ರೈತರ ಸಾಲಮನ್ನಾ ಯೋಜನೆಯನ್ನು ಕೊನೆಗೊಳಿಸಲು ಮುಂದಾಗಿರುವ ಸಿಎಂ ಯಡಿಯೂರಪ್ಪ ಸರ್ಕಾರ ಇದೀಗ ಬಡವರ ಬಂಧು ಯೋಜನೆಗೂ ಕತ್ತರಿ ಹಾಕುವ ಚಿಂತನೆ‌ ನಡೆಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೂ ಕತ್ತರಿ ಬೀಳುವ ಸಾಧ್ಯತೆ ಇದೆ.ಕುಮಾರಣ್ಣನ ರೈತರ ಸಾಲಮನ್ನಾ ಯೋಜನೆಯನ್ನು ಕೊನೆಗೊಳಿಸಲು ಮುಂದಾಗಿರುವ ಸಿಎಂ ಯಡಿಯೂರಪ್ಪ ಸರ್ಕಾರ ಇದೀಗ ಬಡವರ ಬಂಧು ಯೋಜನೆಗೂ ಕತ್ತರಿ ಹಾಕುವ ಚಿಂತನೆ‌ ನಡೆಸಿದೆ.

ಆರ್ಥಿಕವಾಗಿ ಅಶಕ್ತರಾದವರು, ಬೀದಿಬದಿ ವ್ಯಾಪಾರಿಗಳನ್ನು ಲೇವದೇವಿದಾರರ ಮೀಟರ್ ಬಡ್ಡಿ ವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಜಾರಿ ಮಾಡಲಾದ ಬಡವರ ಬಂಧು ಯೋಜನೆ ಬಿಜೆಪಿ ಸರ್ಕಾರ ಬಂದಾಗಿನಿಂದ ಬಹುತೇಕ ನೆನಗುದಿಗೆ ಬಿದ್ದಿದೆ.

 ಖಾಸಗಿ ಲೇವದೇವಿದಾರರ ಶೋಷಣೆಯಿಂದ ಬೀದಿಬದಿ ವ್ಯಾಪಾರಿಗಳನ್ನು ರಕ್ಷಿಸುವ ಸಲುವಾಗಿ ಕುಮಾರಸ್ವಾಮಿ ಈ ಮಹತ್ವದ ಯೋಜನೆಯನ್ನು 2018ರ ನವೆಂಬರ್ 22 ರಂದು ಜಾರಿಗೊಳಿಸಿದ್ದರು. ಶೂನ್ಯ ಬಡ್ಡಿಯಲ್ಲಿ ಸರ್ಕಾರವೇ ನಿತ್ಯ ಸುಮಾರು 10 ಸಾವಿರ ರೂ.ವರೆಗೂ ಕೈ ಸಾಲ ಕೊಡುವ ಮಹತ್ವದ ಯೋಜನೆ ಇದಾಗಿದೆ.

ಆರ್ಥಿಕ ಸಂಕಷ್ಟ, ರಾಜ್ಯದ ಪಾಲಿನ ಕೇಂದ್ರದ ತೆರಿಗೆ ಪಾಲು ಬಾರದಿವುದರಿಂದ ರಾಜ್ಯದ ಬೊಕ್ಕಸ ಬರಿದಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಸಮ್ಮಿಶ್ರ ಸರ್ಕಾರದ ಕೆಲವೊಂದು ಯೋಜನೆಗಳನ್ನು ಕೈಬಿಡಲು ಬಿಜೆಪಿ ಸರ್ಕಾರ ನಿರ್ಧರಿಸಿದೆ. ಇದರಲ್ಲಿ ಬಡವರ ಬಂಧು ಯೋಜನೆಯು ಸಹ ಒಂದಾಗಿದೆ ಎಂದು ಹೇಳಲಾಗಿದೆ.

ಬಡವರ ಬಂಧು ಯೋಜನೆ ಬಿಜೆಪಿ ಸರ್ಕಾರ ಬಂದಾಗಿನಿಂದ ಬಹುತೇಕ ನೆನಗುದಿಗೆ ಬಿದ್ದಿದೆ. ಇದೀಗ ಈ ಯೋಜನೆಗೆ ಸಂಪೂರ್ಣವಾಗಿ ಇತಿಶ್ರೀ ಹಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರವು ತೀರ್ಮಾನಿಸಿದೆ ಎನ್ನಲಾಗಿದೆ. ಇದೇ ಮಾರ್ಚ್ 5ರಂದು ಮಂಡಿಸಲಿರುವ ರಾಜ್ಯ ಬಜೆಟ್‍ನಲ್ಲಿ ಬಡವರ ಬಂಧು ಯೋಜನೆಯನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ. ಈ ಸಲದ ಬಜೆಟ್ ನಲ್ಲಿ ಬಡವರ ಬಂಧು ಯೋಜನೆಗೆ ಸರ್ಕಾರವು ಹಣ ನಿಗದಿ ಮಾಡುವುದಿಲ್ಲ ಎಂದು ತಿಳಿದುಬಂದಿದೆ.

 ಯೋಜನೆ ಜಾರಿಯಾದ 2018-19ನೇ ಸಾಲಿನಲ್ಲಿ 50 ಸಾವಿರ ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ನೀಡುವ ಗುರಿ ಹೊಂದಲಾಗಿತ್ತು. ಆದರೆ ಬಡವರ ಬಂಧು ಯೋಜನೆ ಜಾರಿಯಾದ ಬಳಿಕ ಇದುವರೆಗೆ ಸುಮಾರು 11 ಸಾವಿರ ವ್ಯಾಪಾರಿಗಳಷ್ಟೇ ಯೋಜನೆಯ ಲಾಭ ಪಡೆದಿದ್ದಾರೆ. ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಯೋಜನೆ ಪಡೆದುಕೊಂಡಿದ್ದ ವೇಗ ಬಿಜೆಪಿ ಅಸ್ತಿತ್ವಕ್ಕೆ ಬಂದ ಬಳಿಕ ಕುಂಠಿತವಾಗಿತ್ತು. ಬಿಜೆಪಿ ಸರ್ಕಾರ ಬಂದ ಬಳಿಕ ಯೋಜನೆಗೆ ಸಮರ್ಪಕವಾಗಿ ಹಣ ಬಿಡುಗಡೆಯಾಗದೇ ಹಂತಹಂತವಾಗಿ ಯೋಜನೆ ಮಹತ್ವ ಕಳೆದುಕೊಳ್ಳುತ್ತಾ ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com