ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 7.5 ಲಕ್ಷ ಪರಿಹಾರ: ಆನಂದ್ ಸಿಂಗ್

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟ್ ವೇ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ಆನೆಗಳ ದಾಳಿಯಲ್ಲಿ ಅರಣ್ಯ ಇಲಾಖೆ ವಾಚರ್ ಹಾಗೂ ಸ್ಥಳೀಯ ನಿವಾಸಿಯೊಬ್ಬರು ಮೃತಪಟ್ಟಿದ್ದು ಇವರ ಕುಟುಂಬಕ್ಕೆ 7.5 ಲಕ್ಷ ಪರಿಹಾರ ನೀಡಲಾಗುವುದು...
ಸಚಿವ ಆನಂದ್ ಸಿಂಗ್
ಸಚಿವ ಆನಂದ್ ಸಿಂಗ್

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟ್ ವೇ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ಆನೆಗಳ ದಾಳಿಯಲ್ಲಿ ಅರಣ್ಯ ಇಲಾಖೆ ವಾಚರ್ ಹಾಗೂ ಸ್ಥಳೀಯ ನಿವಾಸಿಯೊಬ್ಬರು ಮೃತಪಟ್ಟಿದ್ದು ಇವರ ಕುಟುಂಬಕ್ಕೆ 7.5 ಲಕ್ಷ ಪರಿಹಾರ ನೀಡಲಾಗುವುದು ಹಾಗೂ ಮೃತ ವಾಚರ್ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ನೀಡಲು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವರಾದ ಆನಂದ್ ಸಿಂಗ್ ತಿಳಿಸಿದ್ದಾರೆ.

ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ಭೇಟಿ ನೀಡಿ ಮೃತ ವಾಚರ್ ಮುನಿಯಪ್ಪ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಅವರು ಮಾತನಾಡಿದರು.

ಮುನಿಯಪ್ಪ ಅವರು 15 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಆನೆಗಳ ದಾಳಿಯಿಂದ ಮೃತಪಟ್ಟಿದ್ದಾರೆ. ಅಲ್ಲದೆ ಸ್ಥಳೀಯ ನಿವಾಸಿ ಆನಂದಯ್ಯ ಎಂಬುವರು ಸಹ ದಾಳಿಗೆ ಸಿಲುಕಿ ಮೃತಪಟ್ಟಿದ್ದು ಸಾರ್ವಜನಿಕರು ಆನೆಯ ಬಳಿ ಹೋಗಲು ಇಲಾಖೆಯವರು ಏಕೆ ಅವಕಾಶ ಮಾಡಿಕೊಟ್ಟರು ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com