ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪ್ರಶ್ನೆಪತ್ರಿಕೆ ಸೋರಿಕೆ: 14 ವಿದ್ಯಾರ್ಥಿಗಳು ವಶಕ್ಕೆ 

ಇತ್ತೀಚೆಗೆ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಕರಣಗಳ ಸಂಬಂಧ ಕೊಲಾರ ಜಿಲ್ಲೆಯ ಬಂಗಾರಪೇಟೆಯ ಎರಡು ಪ್ರತಿಷ್ಠಿತ ಖಾಸಗಿ ಶಾಲೆಗಳ 14 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಿಡುಗಡೆಗೊಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಇತ್ತೀಚೆಗೆ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಕರಣಗಳ ಸಂಬಂಧ ಕೊಲಾರ ಜಿಲ್ಲೆಯ ಬಂಗಾರಪೇಟೆಯ ಎರಡು ಪ್ರತಿಷ್ಠಿತ ಖಾಸಗಿ ಶಾಲೆಗಳ 14 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಿಡುಗಡೆಗೊಳಿಸಿದ್ದಾರೆ. 

ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಪೊಲೀಸರು ಇವರನ್ನು ಮಂಗಳವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ. 

ಈ ವಿದ್ಯಾರ್ಥಿಗಳು ವಾಟ್ಸ್ ಆ್ಯಪ್ ಮೂಲಕ ಪತ್ರಿಕೆಗಲನ್ನು ಕೆಲವರಿಗೆ ಕಳುಹಿಸಿದ್ದರು. ತಾಂತ್ರಿಕ ಮಾಹಿತಿ ಆಧರಿಸಿ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಯಿತು. ನಂತರ ಅವರ ಪೋಷಕರ ಎದುರಿನಲ್ಲಿ ವಿದ್ಯಾರ್ಥಿಗೆ ಮತ್ತೆ ಈ ರೀತಿಯ ಕೃತ್ಯದಲ್ಲಿ ತೊಡಗಿಕೊಳ್ಳದಂತೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com