ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಇಬ್ಬರ ಬಂಧನ, ಮೇಲ್ವಿಚಾರಕ ಅಮಾನತು

ದ್ವಿತೀಯ ಪಿಯುಸಿ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರನ್ನು ಇಂಡಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಿಜಯಪುರ: ದ್ವಿತೀಯ ಪಿಯುಸಿ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರನ್ನು ಇಂಡಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಹಕರಿಸಿದ್ದ ವಿದ್ಯಾರ್ಥಿ ಮುರುಘೇಂದ್ರ ಹಿರೇಮಠ್  ಹಾಗೂ  ಸೋರಿಕೆ‌ ಮಾಡಿದ್ದ  ಮುರುಗೇಶ್ ಸಗರ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇಂಡಿ ಪಟ್ಟಣದ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಬೆಳಿಗ್ಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಪರೀಕ್ಷಾ ಕೇಂದ್ರದಲ್ಲಿದ್ದ ಪರೀಕ್ಷಾರ್ಥಿ ಮುರುಘೇಂದ್ರ ಪ್ರಶ್ನೆಪತ್ರಿಕೆಯನ್ನು ಕಿಟಕಿಯಿಂದ ಹೊರಗೆ ತೋರಿಸಿ ಫೋಟೋ ತೆಗೆಯಲು ಅವಕಾಶ ಮಾಡಿಕೊಟ್ಟಿದ್ದ. ಈ ಮೂಲಕ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ನಾರಾಯಣಕರ್  ಅಮಾನತುಗೊಳಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ‌ ಜಿಲ್ಲಾಧಿಕಾರಿ ಹಾಗೂ  ಎಸ್ಪಿ ಅನುಪಮ್ ಅಗ್ರವಾಲ್ ಪರಿಶೀಲನೆ ನಡೆಸಿ, ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com