ದುಬಾರೆ ಆನೆ ಶಿಬಿರಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ದುಬಾರೆಯಲ್ಲಿ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕೊಡಗು: ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ದುಬಾರೆಯಲ್ಲಿ ವರದಿಯಾಗಿದೆ.

ಲಯನ್ಸ್ ಶಾಲೆಯ ಶ್ರೇಯಸ್ [14]​ ಮತ್ತು ಲೆನಿನ್​ (15) ಮೃತ‌ ದುರ್ದೈವಿಗಳು.

ಶ್ರೇಯಸ್​ 9ನೇ ಹಾಗೂ ಲೆನಿನ್​ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಸ್ಕೌಟ್ಸ್ ಹಾಗೂ ಗೈಡ್ಸ್ ತಂಡದ ೩೯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ದುಬಾರೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಇನ್ನು ಶಾಲಾ ಶಿಕ್ಷಕರು ಈ ಪ್ರವಾಸಕ್ಕಾಗಿ ಇಲಾಖೆಯ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ. ಶಿಕ್ಷಕರ ನಿರ್ಲಕ್ಷ್ಯ ಃಆಗೂ ಸಂಸ್ಥೆಯ ವಿರುದ್ಧ ಸೂಕ್ತ ಕ್ರ್ಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹೇಳೀದ್ದಾರೆ.

ಘಟನೆ ಕುರಿತು ಕುಶಾಲನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com