ಕರೋನ: ಕರ್ನಾಟಕ ಸರ್ಕಾರದಿಂದ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕ ಬ್ರೇಕ್!
ರಾಜ್ಯ
ಕರೋನ: ಕರ್ನಾಟಕ ಸರ್ಕಾರದಿಂದ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕ ಬ್ರೇಕ್!
ಕರೋನಾ ವೈರಸ್ ಭೀತಿಯಿಂದಾಗಿ ಕರ್ನಾಟಕ ಸರ್ಕಾರ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕ ಬ್ರೇಕ್ ಹಾಕಿದೆ.
ಬೆಂಗಳೂರು: ಕರೋನಾ ವೈರಸ್ ಭೀತಿಯಿಂದಾಗಿ ಕರ್ನಾಟಕ ಸರ್ಕಾರ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕ ಬ್ರೇಕ್ ಹಾಕಿದೆ.
ರಾಜ್ಯ ಸರ್ಕಾರದ ಕಚೇರಿಗಳಿಗೆ, ಕಾರ್ಪೊರೇಟ್ ಹಾಗೂ ಐಟಿ ಕಂಪನಿಗಳಿಗೆ ಈ ತಾತ್ಕಾಲಿಕ ಬದಲಾವಣೆ ಅನ್ವಯವಾಗಲಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.
ಕರೋನಾ ವೈರಸ್ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಲಲಾಗಿದೆ. ಐಟಿ ಸಂಸ್ಥೆಗಳೊಂದಿಗೆ ನಮ್ಮ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಕರೋನಾ ತಡೆಗಟ್ಟುವುದಕ್ಕೆ ಮಾರ್ಗಸೂಚಿಗಳ ಬಗ್ಗೆ ಮಾತನಾಡಿದ್ದಾರೆ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ತಾತ್ಕಾಲಿಕವಾಗಿ ನಿಲ್ಲಿಸುವುದೂ ಸಹ ಇವುಗಳ ಪೈಕಿ ಒಂದು ಎಂದು ಸುಧಾಕರ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಈ ವರೆಗೂ ಒಂದೇ ಒಂದು ಕರೋನಾ ವೈರಸ್ ಪ್ರಕರಣವೂ ಪತ್ತೆಯಾಗಿಲ್ಲ. ವೈರಸ್ ಹರಡದಂತೆ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸುಧಾಕರ್ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ