ಕಲಬುರಗಿ: ಕೋವಿಡ್ -೧೯ ಶಂಕಿತ ವ್ಯಕ್ತಿ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲು

ಸೌದಿ ಅರಬಿಯಾದಿಂದ ಇತ್ತೀಚಿಗೆ ವಾಪಸಾಗಿದ್ದ ೭೫ ವರ್ಷದ ಹಿರಿಯ ವ್ಯಕ್ತಿಯೊಬ್ಬರಲ್ಲಿ ಶಂಕಿತ ಸೋಂಕು ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಗುಲ್ಬರ್ಗಾದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸೋಲೇಷನ್ ವಾರ್ಡ್ ನಲ್ಲಿ ದಾಖಲಿಸಲಾಗಿದೆ
ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ
ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ
Updated on: 

ಕಲಬುರಗಿ:  ಸೌದಿ ಅರಬಿಯಾದಿಂದ ಇತ್ತೀಚಿಗೆ ವಾಪಸಾಗಿದ್ದ ೭೫ ವರ್ಷದ ಹಿರಿಯ ವ್ಯಕ್ತಿಯೊಬ್ಬರಲ್ಲಿ ಶಂಕಿತ ಸೋಂಕು ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಗುಲ್ಬರ್ಗಾದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸೋಲೇಷನ್ ವಾರ್ಡ್ ನಲ್ಲಿ ದಾಖಲಿಸಲಾಗಿದೆ

ವ್ಯಕ್ತಿಯಲ್ಲಿ ಮಾರಾಣಂತಿಕ ಕೊರೊನೊ ವೈರೆಸ್ ಸೋಂಕಿನ ಲಕ್ಷಣಗಳು ಕಂಡುಬಂದ ಕಾರಣ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಮೂಲಗಳು ಹೇಳಿವೆ

ಶಂಕಿತ ಸೋಂಕು ಪೀಡಿತ ವ್ಯಕ್ತಿಯ ರಕ್ತ,ಕಫದ ಮಾದರಿಗಳನ್ನು ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ಪರೀಕ್ಷಾ ವರದಿಗಾಗಿ ಎದುರು ನೋಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com