ಕೊರೋನಾ ವೈರಸ್ ಕಾರಣ ಎಸ್ ಎಸ್ ಎಲ್ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ- ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 

ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣ ಈಗಾಗಲೇ ನಿಗಧಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ ವಿಚಾರವಾಗಿ  ಹಬ್ಬಿರುವ ವದಂತಿಗಳನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ತಳ್ಳಿಹಾಕಿದೆ
ಶಿವಾಜಿನಗರ ಬಸ್ ನಿಲ್ದಾಣದಲ್ಲಿ ಮಾಸ್ಕ್ ಧರಿಸಿ ಕುಳಿತಿರುವ ಪ್ರಯಾಣಿಕ
ಶಿವಾಜಿನಗರ ಬಸ್ ನಿಲ್ದಾಣದಲ್ಲಿ ಮಾಸ್ಕ್ ಧರಿಸಿ ಕುಳಿತಿರುವ ಪ್ರಯಾಣಿಕ

ಬೆಂಗಳೂರು: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣ ಈಗಾಗಲೇ ನಿಗಧಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ ವಿಚಾರವಾಗಿ  ಹಬ್ಬಿರುವ ವದಂತಿಗಳನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ತಳ್ಳಿಹಾಕಿದೆ

ಈ ರೀತಿಯ ವದಂತಿಗಳು ಸುಳ್ಳು. ವೇಳಾಪಟ್ಟಿಯನ್ನು ಬದಲಾವಣೆ ಮಾಡುವುದಿಲ್ಲ ಎಂದು ಬೋರ್ಡ್ ನಿರ್ದೇಶಕಿ ವಿ. ಸುಮಂಗಲಾ ಸ್ಪಷ್ಟಪಡಿಸಿದ್ದಾರೆ. ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 27 ರಿಂದ ಆರಂಭವಾಗಲಿದ್ದು, ಏಪ್ರಿಲ್ 9 ರಂದು ಮುಕ್ತಾಯಗೊಳ್ಳಲಿದೆ. 

ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆಯಾಗಲಿದೆ ಎಂದು ಕೆಲವು ದುಷ್ಕರ್ಮಿಗಳು ವದಂತಿಗಳನ್ನು ಹಬ್ಬುತ್ತಿದ್ದಾರೆ. ಅಲ್ಲದೇ ಮ್ಯಾಪ್ಸ್ ಆಫ್ ಇಂಡಿಯಾ ವೆಬ್ ಸೈಟ್ ನಲ್ಲಿ ನಕಲಿ ವೇಳಾಪಟ್ಟಿಯನ್ನು ಅಪ್ ಲೋಡ್ ಮಾಡಲಾಗಿದೆ. ನಕಲಿ ವೇಳಾಪಟ್ಟಿಯನ್ನು ವಾಟ್ಸಾಪ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೆ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲಕ್ಕೊಳಗಾಗಿದ್ದಾರೆ.

ಹತ್ತನೇ ತರಗತಿ ಪರೀಕ್ಷೆಗಳು ಮಾರ್ಚ್ 20 ರಿಂದ ಆರಂಭವಾಗಲಿದ್ದು, ಏಪ್ರಿಲ್ ನಲ್ಲಿ ಮುಕ್ತಾಯಗೊಳ್ಳಲಿವೆ ಎಂದು ನಕಲಿ ವೇಳಾಪಟ್ಟಿಯಲ್ಲಿ ಹೇಳಲಾಗಿದೆ. 

ರಾಜ್ಯ ಸೆಕೆಂಡರಿ ಶಿಕ್ಷಣ ಪರೀಕ್ಷೆ ಮಂಡಳಿಯ ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತೆ ಇದೆ.
ಮಾರ್ಚ್ 27ಕ್ಕೆ ಪ್ರಥಮ ಭಾಷೆ.
ಮಾರ್ಚ್ 30- ವಿಜ್ಞಾನ, ರಾಜಕೀಯ ವಿಜ್ಞಾನ, ಕರ್ನಾಟಕ, ಹಿಂದೂಸ್ಥಾನಿ ಸಂಗೀತ
ಏಪ್ರಿಲ್ 1  - ದ್ವಿತೀಯ ಭಾಷೆ
ಏಪ್ರಿಲ್ 3- ತೃತೀಯ ಭಾಷೆ/ NSQF ವಿಷಯಗಳು
ಏಪ್ರಿಲ್ 4- ಅರ್ಥಶಾಸ್ತ್ರ, ಕಂಪ್ಯೂಟರ್ ವಿಜ್ಞಾನ, ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಮತ್ತಿತರ ವಿಷಯಗಳ ಪರೀಕ್ಷೆ
ಏಪ್ರಿಲ್ 7- ಗಣಿತ ಶಾಸ್ತ್ರ, ಸಮಾಜಶಾಸ್ತ್ರ
ಏಪ್ರಿಲ್ 9- ಸಮಾಜ ವಿಜ್ಞಾನ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com