ಸರ್ಕಾರಿ ನೌಕರರ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆ 10 ದಿನಗಳಿಗೆ ಇಳಿಕೆ

ಪ್ರತಿ ತಿಂಗಳ ನಾಲ್ಕನೇ ಶನಿವಾರದಂದು ಸರ್ಕಾರಿ ಕಛೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗಿದ್ದ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆಯನ್ನು 10 ದಿನಗಳಿಗೆ ಇಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು:  ಪ್ರತಿ ತಿಂಗಳ ನಾಲ್ಕನೇ ಶನಿವಾರದಂದು ಸರ್ಕಾರಿ ಕಛೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗಿದ್ದ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆಯನ್ನು 10 ದಿನಗಳಿಗೆ ಇಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆ ಸೌಲಭ್ಯದಿಂದ ವಂಚಿತರಾಗಿರುವುದರಿಂದ ಈ ವೃಂದದ ನೌಕರರಿಗೆ ಈ ಹಿಂದಿನಂತೆ ಪ್ರತಿ ವರ್ಷಕ್ಕೆ 15 ದಿನಗಳ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಣ, ಪೊಲೀಸ್, ಆರೋಗ್ಯ ಹಾಗೂ ಇನ್ನಿತರ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವೊಂದು ವೃಂದದ ನೌಕರರಿಗೆ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ಸಾರ್ವತ್ರಿಕ ರಜೆ ಅನ್ವಯವಾಗುವುದಿಲ್ಲ. ಹಾಗಾಗಿ ಅಂತಹಾ ನೌಕರರಿಗೆ ಮಾತ್ರ ಈ ಸಾಲಿನ ಕ್ಯಾಲೆಂಡರ್ ವರ್ಷದಿಂದ ಜಾರಿಗೆ ಬರುವಂತೆ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆ ಮಂಜುರು ಂಆಡಿ ಆದೇಶಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com