ಮಣಿಪಾಲದಲ್ಲಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು; ಕೊರೋನಾ ಶಂಕೆ

ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಇತ್ತೀಚೆಗೆ ಅಮೇರಿಕಾ ಮತ್ತು ಕುವೈಟ್ ನಿಂದ ಬಂದಿದ್ದು, ಕೊರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ. ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com