ರಾಜ್ಯ

ಕೊರೋನಾ ಎಫೆಕ್ಟ್: ಬಿಬಿಎಂಪಿ ಆರೋಗ್ಯ ಸಿಬ್ಬಂದಿಗೆ ಸಾರ್ವತ್ರಿಕ ರಜೆ ರದ್ದು

ಕೊರೋನಾ ಎಫೆಕ್ಟ್: ಬಿಬಿಎಂಪಿ ಆರೋಗ್ಯ ಸಿಬ್ಬಂದಿಗೆ ಸಾರ್ವತ್ರಿಕ ರಜೆ ರದ್ದು
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣಕ್ಕೆ ಬರುವವರೆಗೆ ಬಿಬಿಎಂಪಿ ಆರೋಗ್ಯ ವಿಭಾಗದ ಎಲ್ಲಾ ಹಂತದ ಅಧಿಕಾರಿ, ಸಿಬ್ಬಂದಿಗೆ ಸಾರ್ವತ್ರಿಕ ರಜೆ ರದ್ದುಪಡಿಸಿ ಬಿಬಿಎಂಪಿ ಆದೇಶಿಸಿದೆ. 

ರಾಜ್ಯದಲ್ಲಿ ಕೊರೋನಾ ವೈರಾಣು ಹರಡುವುದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಅನೇತ ತುರ್ತು ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾ.14 ಎರಡನೇ ಶನಿವಾರ, ಮಾ.15ರ ಭಾನುವಾರ ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿ ಸಿಬ್ಬಂದಿಗೆ ಕರ್ತವ್ಯಕ್ಕೆ ರಾಜರಾಗುವಂತೆ ಸೂಚಿಸಲಾಗಿದೆ. 

ಜೊತೆಗೆ ಕೊರೋನಾ ನಿಯಂತ್ರಣಕ್ಕೆ ಬರುವವರೆಗೆ ಮುಂಬರುವ ಎಲ್ಲಾ ಸಾರ್ವತ್ರಿಕ ರಜಾ ದಿನಗಳಂದು ಪಾಲಿಕೆಯ ರೆಫರಲ್ ಹಾಗೂ ಹೆರಿಗೆ ಆಸ್ಪತ್ರೆಗಳು, ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರುಗಳು, ಕಚೇರಿಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಎಲ್ಲಾ ಖಾಯಂ ಮತ್ತು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರವಿಕುಮಾರ್ ಸುರಪುರ ಆದೇಶಿಸಿದ್ದಾರೆ.

ಪರಿಸ್ಥಿತಿ ಸುಧಾರಿಸುವವರೆಗೂ ಆಸ್ಪತ್ರೆಯ ಕಚೇರಿ ಮುಖ್ಯಸ್ಥರು ವೈದ್ಯರು, ಅಧಿಕಾರಿ, ಸಿಬ್ಬಂದಿಗೆ ರಜೆ ಮುಂಜೂರು ಮಾಡದಂತೆ ಸೂಚಿಸಿದ್ದಾರೆ. ಈಗಾಗಲೇ ರಜೆ ಮೇಲೆ ತೆರಳಿರುವವರನ್ನು ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ವಿಶೇಷ ಆಯುಕ್ತರು ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.