

ಹಾವೇರಿ: ಕೊರೊನಾ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ್ದ ವೈದ್ಯರೊಬ್ಬರನ್ನು ಶಾಸಕ ನೆಹರು ಓಲೆಕಾರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ತೀವ್ರ ತರಾಟೆಗೆ ಗುರಿಪಡಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಡಾ. ಶರಣು ಅಂಗಡಿ ಅವರಿಗೆ ಶಾಸಕರು, ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.
ದುಬೈನಿಂದ ವಾಪಸ್ಸಾಗಿರುವ ಜಿಲ್ಲೆಯ ವ್ಯಕ್ತಿಯಲ್ಲಿ ಕೊರೊನಾ ಸೋಂಕಿದೆ ಎಂದು ಡಾ.ಶರಣು ಅವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ಓಲೇಕಾರ ಹಾಗೂ ಆರೋಗ್ಯ ಅಧಿಕಾರಿಗಳು ವೈದ್ಯನಿಗೆ ಹಿಗ್ಗಾಮುಗ್ಗಾ ಝಾಡಿಸಿದ್ದಾರೆ.
ಶಾಸಕ, ಅಧಿಕಾರಿಗಳು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಸುಳ್ಳು ಸುದ್ದಿ ಹಬ್ಬಿಸಿರುವುದು ತಪ್ಪಾಗಿದೆ ಎಂದು ವೈದ್ಯ ಡಾ.ಶರಣು ಅಂಗಡಿ, ಕೈ ಮುಗಿದು ಕ್ಷಮೆ ಕೇಳಿದ್ದಾರೆ.