ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ- ಶ್ರೀರಾಮುಲು

ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗಬೇಕಿದ್ದು, ಸುಮಾರು 14 ದಿನಗಳ ಕಾಲ ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಡ್ಡಾಯ. ವಿದೇಶದಿಂದ ಆಗಮಿಸಿದವರು ಚಾಚುತಪ್ಪದೇ ಈ ಕಾನೂನು ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ
ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು
Updated on: 

ಕಲಬುರಗಿ:ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗಬೇಕಿದ್ದು, ಸುಮಾರು 14 ದಿನಗಳ ಕಾಲ ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಡ್ಡಾಯ. ವಿದೇಶದಿಂದ ಆಗಮಿಸಿದವರು ಚಾಚುತಪ್ಪದೇ ಈ ಕಾನೂನು ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ

ಜಿಲ್ಲಾಸ್ಪತ್ರೆಯ ಐಸೋಲೇಟೆಡ್ ವಾರ್ಡ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗದಿದ್ದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮೃತ ವ್ಯಕ್ತಿಯ ಮನೆ ಸುತ್ತಮುತ್ತಲಿನ 5 ಕಿಮೀ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಣೆ ಮಾಡಲಾಗಿದೆ 
ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಿಟಿವ್, ನೆಗೆಟಿವ್ ಬಂದರೂ ಜನ ಭಯಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸಬೇಕು ಎಂದ ಅವರು ವೈರಸ್ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

ಬಳಿಕ ನಗರದ ಪಂಡಿತ್ ರಂಗಮಂದಿರದಲ್ಲಿ ಭಾರತೀಯ ವೈದ್ಯಕೀಯ ಮಂಡಳಿ (ಐಎಂಎ) ಜಿಲ್ಲಾ ಘಟಕದ ವತಿಯಿಂದ ಖಾಸಗಿ ವೈದ್ಯರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶರತ್ ಬಿ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಖಾಸಗಿ ಆಸ್ಪತ್ರೆಗಳು ಸೇರಿ ವೈದ್ಯರು ಜಿಲ್ಲಾಡಳಿತದ ಜೊತೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು

ಮಾಸ್ಕ್ ಧರಿಸುವುದು ಸೇರಿದಂತೆ ಮುಂಜಾಗ್ರತೆ ವಹಿಸಿದರೆ ಯಾವುದೇ ಸಮಸ್ಯೆ ಆಗುವುದಿಲ್ಲ. ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುವ ಯಾವುದೇ ರೋಗಿಯನ್ನು ಉಪಚರಿಸಿ.ಒಂದು ವೇಳೆ ಕೆಮ್ಮು, ಜ್ವರ, ಶೀತ, ಉಸಿರಾಟದ ಸಮಸ್ಯೆ ಇದ್ದು, ಶಂಕಿತ ಕೊರೊನಾ ವೈರಸ್ ಲಕ್ಷಣಗಳಿದ್ದಲ್ಲಿ ಮಾತ್ರ ಸಹಾಯವಾಣಿ -1047ಕ್ಕೆ ಕರೆ ಮಾಡಬೇಕು. ಆಗ ಆರೋಗ್ಯ ಇಲಾಖೆಯ ಸಿಬ್ಬಂದಿ ಬಂದು ರೋಗಿಗಳನ್ನು ಕರೆದೊಯ್ಯಲಿದ್ದಾರೆ. ಬಳಿಕ ಅವರಿಗೆ ಕಲಬುರಗಿ ನಗರದ ಜಿಮ್ಸ್  ಮತ್ತು ಇಎಸ್ಐಸಿಯ ಕ್ವಾರಾಂಟೀನ್ ಹಾಗೂ ಐಸೋಲೇಷನ್ ವಾರ್ಡಗಳಲ್ಲಿ ದಾಖಲಿಸಿ, ನಿಗಾವಹಿಸಲಿದ್ದಾರೆ ಎಂದು ಅವರು ವಿವರಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com