ಬೆಂಗಳೂರು: ನಾಡೋಜ, ಖ್ಯಾತ ಲೇಖಕ ಹಾಗೂ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತಿತರ ಹಲವು ಮಂದಿ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರಿಗೆ ಪಾಪು ಎಂದೇ ಚಿರಪರಿತರಾಗಿದ್ದ ಪಾಟೀಲ ಪುಟ್ಟಪ್ಪ, ನವಯುಗ ಮಾಸ ಪತ್ರಿಕೆಯ ಸಂಪಾದಕರಾಗಿ ಸಾಹಿತಿಯಾಗಿ, ಅಂಕಣಕಾರರಾಗಿಯೂ ಗುರುತಿಸಿಕೊಂಡವರು. ಅವರ ನಿಧನದಿಂದ ಕನ್ನಡ ನಾಡು ಧೀಮಂತ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಪಾಟೀಲ ಪುಟ್ಟಪ್ಪ ಅವರ ನಿಧನ ಇಡೀ ಕರ್ನಾಟಕಕ್ಕೆ ತುಂಬಲಾರದ ಬಹುದೊಡ್ಡ ನಷ್ಟ ಎಂದು ಎಚ್ ಡಿ ಕುಮಾರಸ್ವಾಮಿ ಭಾವಪೂರ್ವ ವಿಧಾಯ ಹೇಳಿದ್ದಾರೆ.
Advertisement