ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ, ಕಾರು ಚಾಲಕ ಸ್ಥಳದಲ್ಲೇ ಸಾವು

ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಇಂದಿರಾನಗರದಲ್ಲಿ ನಡೆದಿದೆ
ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ, ಕಾರು ಚಾಲಕ ಸ್ಥಳದಲ್ಲೇ ಸಾವು
ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ, ಕಾರು ಚಾಲಕ ಸ್ಥಳದಲ್ಲೇ ಸಾವು
Updated on: 

ಬೆಂಗಳೂರು: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಇಂದಿರಾನಗರದಲ್ಲಿ ನಡೆದಿದೆ.

ಇಂದಿರಾನಗರದ ಬಿನ್ನಮಂಗಲದಲ್ಲಿ ರಸ್ತೆ ಸಿಗ್ನಲ್ ಸಮೀಪ ನಿಂತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ಬಂದ ಲಾರಿ ಢಿಕ್ಕಿಯಾಗಿದೆ.  ಸಿಲಿಂಡರ್ ತುಂಬಿದ್ದ ಲಾರಿ‌ ಡಿಕ್ಕಿಯಾಗಿ ಇಂಡಿಕಾ( KA40. 6145 ) ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನೊಂದು ಕಾರಿನಲ್ಲಿ ಏರ್ ಬ್ಯಾಗ್ ತೆರೆದುಕೊಂಡ ಕಾರಣ ಆ ಕಾರಿನ ಚಾಲಕ ಪ್ರಾಣಾಪಾಯದಿಂಡ ಪಾರಾಗಿದ್ದಾನೆ. ಘಟನೆಯಲ್ಲಿ ಎರಡೂ ಕಾರುಗಳು ಸಂಪೂರ್ಣ ಜಖಂ ಆಗಿದೆ.

ಹಲಸೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದೇ ವೇಳೆ ಅಪಘಾತಕ್ಕೆ ಕಾರಣವಾಗಿದ್ದ ಲಾರಿ ಚಾಲಕ ಪರಾರಿಯಾಗಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com