ಮಾ‌17 ರಿಂದ 20ರವರೆಗೆ ವಿಧಾನಸೌಧ ಸಭಾಧ್ಯಕ್ಷರ ಕೊಠಡಿಗೆ ಸಾರ್ವಜನಿಕರ ಪ್ರವೇಶ ಇಲ್ಲ

ಕರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸೌಧದ ಸಮ್ಮೇಳನ ಸಭಾಂಗಣ ಹಾಗೂ ಸಭಾಧ್ಯಕ್ಷರ ಕೊಠಡಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದೆ‌.
ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ
Updated on

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕರೋನಾ ಕೋವಿಡ್-೧೯ ಭೀತಿ ವಿಧಾನಸೌಧಕ್ಕೂ ಪಸರಿಸಿದೆ. 

ಕರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸೌಧದ ಸಮ್ಮೇಳನ ಸಭಾಂಗಣ ಹಾಗೂ ಸಭಾಧ್ಯಕ್ಷರ ಕೊಠಡಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದೆ‌.

ಮಾ‌17ರಿಂದ 20ರವರೆಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವೇಶ ನಿಷೇಧವಾಗಿರುವುದರಿಂದ ಶಾಸಕರಾಗಲೀ ಅಥವಾ ಜನಪ್ರತಿನಿಧಿಗಳಾಗಲೀ ತಮ್ಮ ಕಡೆಯವರಿಗೆ ವಿಧಾನಸೌಧಕ್ಕೆ ಪ್ರವೇಶಕ್ಕಾಗಿ ಶಿಫಾರಸು ಮಾಡದಂತೆ ಕಾಗೇರಿ ಸೂಚಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com