ಹೊಸಪೇಟೆ: ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ನಿಯಂತ್ರಣ ತಪ್ಪಿ ಬೈಕ್ ರಸ್ತೆ ತಡೆಗೋಡೆಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬೈಕ್ ಅಪಘಾತ
ಬೈಕ್ ಅಪಘಾತ
Updated on: 

ಹೊಸಪೇಟೆ: ನಿಯಂತ್ರಣ ತಪ್ಪಿ ಬೈಕ್ ರಸ್ತೆ ತಡೆಗೋಡೆಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಇಟಗಿ ಬಳಿ ಈ ದುರಂತ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗಳೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು 40ವರ್ಷ ವರ್ಷದ ಅಲಬೂರು ಬಸವರಾಜ್ ಎಂದು ಗುರುತಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿಪುವ ಇಟಗಿ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com