ಮರಳಿ ಬಾರದೂರಿಗೆ 'ಪಾಪು' ಪಯಣ: ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

ಸೋಮವಾರ ನಿಧನರಾದ ನಾಡಿನ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾಕ್ಟರ್ ಪಾಟೀಲ ಪುಟ್ಟಪ್ಪ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಪಾಟೀಲ್ ಪುಟ್ಟಪ್ಪ
ಪಾಟೀಲ್ ಪುಟ್ಟಪ್ಪ
Updated on

ಹಲಗೇರಿ: ಸೋಮವಾರ ನಿಧನರಾದ ನಾಡಿನ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾಕ್ಟರ್ ಪಾಟೀಲ ಪುಟ್ಟಪ್ಪ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
 
ರಾಣೆಬೆನ್ನೂರು ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪಾಪು ಅವರ ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.
 
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ ಪಾಟೀಲ, ಕೂಡಲ ಸಂಗಮದ ಬಸವಮೃತ್ಯುಂಜಯ ಸ್ವಾಮೀಜಿ , ತರಳಬಾಳು ಶಾಖಾಮಠದ ಪಂಡಿತಾರಾದ್ಯ ಸ್ವಾಮೀಜಿ, ಮುಂಡರಗಿಯ ನಿಜಗುಣನಾನಂದ ಸ್ವಾಮೀಜಿ, ಶಾಸಕ ಅರುಣಕುಮಾರ ಗುತ್ತೂರ, ಜಿ.ಪಂ ಅಧ್ಯಕ್ಷ ಬಸನಗೌಡ ದೇಸಾಯಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ರುದ್ರಪ್ಪ ಲಮಾಣಿ, ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ, ಮಾಜಿ ಸಂಸದ ಐ.ಜಿ.ಸನದಿ ಸೇರಿದಂತೆ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್ ಪುಟ್ಟಪ್ಪ ಅವರು ಸೋಮವಾರ ಹುಬ್ಬಳ್ಳಿಯಲ್ಲಿ ನಿಧನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com