ಕೊರೋನಾ ಎಫೆಕ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಸೇವೆ ಸ್ಥಗಿತ

ಕೊರೋನಾ ವೈರಸ್ ವ್ಯಾಪಿಸುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಚೇರಿಗಳ ಸಾರ್ವಜನಿಕ ಸೇವೆಗಳನ್ನು ಸ್ಥಗಿತಗೊಳಿಸಿ ದ.ಕ.ಜಿಲ್ಲಾಧಿಕಾರಿ ಸಿಂದೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ಕೊರೋನಾ ವೈರಸ್ ವ್ಯಾಪಿಸುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಚೇರಿಗಳ ಸಾರ್ವಜನಿಕ ಸೇವೆಗಳನ್ನು ಸ್ಥಗಿತಗೊಳಿಸಿ ದ.ಕ.ಜಿಲ್ಲಾಧಿಕಾರಿ ಸಿಂದೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ಪಡೆಯುವಂತಹ ಹಾಗೂ ಜನ ಹೆಚ್ಚು ಸೇರುವಂತಹ ಇಲಾಖೆಗಳ ಸೇವೆಯನ್ನು ಮಾ.31ರ ತನಕ ನಿರ್ಬಂಧಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿಲ್ಲ. ಆದರೆ ಅಲ್ಲಿ ಲಭಿಸುವ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಮುಖ್ಯವಾಗಿ ಕಂದಾಯ ಇಲಾಖೆಯ ಸೇವೆಗಳು, ಆಧಾರ್ ತಿದ್ದುಪಡಿ, ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಹೊಸ ವಾಹನಗಳ ನೋಂದಣಿ, ಹೊಸ ಡ್ರೈವಿಂಗ್ ಲೈಸನ್ಸ್ , ಉಪ ನೋಂದಣಿ ಕಚೇರಿಯ ಆಸ್ತಿ ನೋಂದಣಿ , ಸ್ಥಳೀಯ ಆಡಳಿತ ಕಚೇರಿಯ ವಿವಿಧ ಸೇವೆಗಳು, ಲೈಸನ್ಸ್ ನೀಡಿಕೆ ಇತ್ಯಾದಿ ಸೇವೆಗಳು ಮಾರ್ಚ್ 31 ರ ತನಕ ಲಭ್ಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸ್ಥಗಿತ ಮಾಡಲಾದ ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದರೂ, ಆ ಕಚೇರಿಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ ಹಾಗೂ ಸಂಬಂಧಿಸಿದ ಎಲ್ಲ ಸಿಬ್ಬಂದಿ ಕಚೇರಿಯಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಅನಧಿಕೃತ ಗೈರು ಹಾಜರಿ ಹಾಗೂ ಕಚೇರಿಯನ್ನು ತೆರೆಯದಿದ್ದಲ್ಲಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com