ಕೇರಳ ಮಾದರಿ ಅನುಸರಿಸಿ, ಬಡವರ ನೆರವಿಗೆ ಬನ್ನಿ: ಕೊರೋನಾ ಕುರಿತು ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಕಿವಿಮಾತು

ಕೊರೋನಾವೈರಸ್ ಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ಆರ್ಥಿಕತೆಗೆ ನೆರೆಯ ಕೇರಳದ ಮಾದರಿಯನ್ನು ಅನುಸರಿಸಿ ಚೈತನ್ಯ ತರಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖ್ಯ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. 
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ
Updated on

ಬೆಂಗಳುರು: ಕೊರೋನಾವೈರಸ್ ಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ಆರ್ಥಿಕತೆಗೆ ನೆರೆಯ ಕೇರಳದ ಮಾದರಿಯನ್ನು ಅನುಸರಿಸಿ ಚೈತನ್ಯ ತರಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖ್ಯ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಕೊರೋನಾ ಕುರುರಿತು ನೆರೆಯ ಕೇರಳ ರಾಜ್ಯದಲ್ಲಿ ಅನುಸರಿಸಿದ ಮಾದರಿಯನ್ನೇ ಕರ್ನಾಟಕದಲ್ಲಿಯೂ ಅಳವಡಿಸಿಕೊಳ್ಲಬೇಕೆಂದು ಆಗ್ರಹಿಸಿರುವ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.

"ಕೊರೋನಾವೈರಸ್ ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಅಲ್ಲಿನ ಜನರಿಗೆ ₹20,000 ಕೋಟಿ ಪ್ಯಾಕೇಜ್ ಘೋಷಿಸಿದೆ. ಇದರಲ್ಲಿ, ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, MGNREGSಗೆ ಅನುದಾನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ, ಬಾಕಿ ಮರುಪಾವತಿ, ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ?

"ಕೇರಳದಲ್ಲಿ 26 ಕೊರೊನಾ ಪ್ರಕರಣ ವರದಿಯಾಗಿದ್ದರೆ ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ.ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ.ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು.

"ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, MGNREGSಗೆ ಅನುದಾನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ‌ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು. 

"ಕೊರೊನಾ ವೈರಸ್ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು." ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, MGNREGSಗೆ ಅನುದಾನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ‌ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು.
(3/4)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com