ತುಮಕೂರು ರೈಲ್ವೆ ನಿಲ್ದಾಣದಲ್ಲಿ ಕಾಟಾಚಾರಕ್ಕೆ ಕೊರೋನಾ ಪರೀಕ್ಷೆ: ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು 

ತುಮಕೂರಿನ ರೈಲು ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿ ಕಾಟಾಚಾರಕ್ಕೆ ಕೊರೋನಾ ಪರೀಕ್ಷೆ ನಡೆಸುತ್ತಿದ್ದಾರೆ ಎಂಬ ವರದಿ ಬಂದ ತಕ್ಷಣ ಆರೋಗ್ಯ ಸಚಿವರು ಎಚ್ಚೆತ್ತುಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ತುಮಕೂರಿನ ರೈಲು ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿ ಕಾಟಾಚಾರಕ್ಕೆ ಕೊರೋನಾ ಪರೀಕ್ಷೆ ನಡೆಸುತ್ತಿದ್ದಾರೆ ಎಂಬ ವರದಿ ಬಂದ ತಕ್ಷಣ ಆರೋಗ್ಯ ಸಚಿವರು ಎಚ್ಚೆತ್ತುಕೊಂಡಿದ್ದಾರೆ.

ಬೇಜವಬ್ದಾರಿ ಮತ್ತು ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಯನ್ನು ಅಮಾನತು ಮಾಡಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಆದೇಶ ಹೊರಡಿಸಿದ್ದಾರೆ.

ತುಮಕೂರಿನ ರೈಲು ನಿಲ್ದಾಣದಲ್ಲಿ ಓಡಾಡುವ ಪ್ರಯಾಣಿಕರನ್ನು ಕೊರೋನಾ ವೈರಸ್ ಪರೀಕ್ಷೆ ತಪಾಸಣೆಗೆ ಎಂದು ಆರೋಗ್ಯಾಧಿಕಾರಿಯನ್ನು ನಿಯೋಜಿಸಲಾಗಿತ್ತು. ಆದರೆ ಅವರು ಮೊಬೈಲ್ ನಲ್ಲಿ ಮಾತನಾಡುತ್ತಾ ಪ್ರಯಾಣಿಕರನ್ನು ಸರಿಯಾಗಿ ಪರೀಕ್ಷೆ ಮಾಡದೆ ಕಾಟಾಚಾರಕ್ಕೆ ನೋಡಿ ಕಳುಹಿಸುವ ವಿಡಿಯೊ ಮಾಧ್ಯಮಗಳಲ್ಲಿ ಸುದ್ದಿಯಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಇದು ಆರೋಗ್ಯ ಸಚಿವರ ಗಮನಕ್ಕೆ ಬಂದಿದ್ದು ಬೇಜವಬ್ದಾರಿ ಮತ್ತು ಕರ್ತವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ತಮ್ಮ ಹಿತವನ್ನು ಬದಿಗಿರಿಸಿ ಹಗಲು-ರಾತ್ರಿ ಜನಸೇವೆ ಮಾಡುತ್ತಿರುವ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ಕಾರ್ಯ ನಾಗರಿಕ ವಲಯದಲ್ಲಿ ಪ್ರಶಂಸೆಗೆ ಒಳಗಾಗುತ್ತಿದೆ. ಇಂತಹ ಸಮಯದಲ್ಲಿ ಈ ಅಧಿಕಾರಿಯ ಬೇಜವಾಬ್ದಾರಿ ನಡೆ ಖಂಡನೀಯ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com