ಹುಬ್ಬಳ್ಳಿ-ಅಂಕೋಲ ರೈಲ್ವೇ ಮಾರ್ಗಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜನರ ಬೇಡಿಕೆಗೆ ಮಣಿದಿರುವ ರಾಜ್ಯ ಸರ್ಕಾರ, ವನ್ಯ ಜೀವಿ ಮಂಡಳಿ ಸದಸ್ಯರ ವಿರೋಧದ ನಡುವೆಯೂ ಹುಬ್ಭಳ್ಳಿ-ಅಂಕೋಲ ರೈಲ್ವೇ ಯೋಜನೆಗೆ ಹಸಿರು ನಿಶಾನೆ ತೋರಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜನರ ಬೇಡಿಕೆಗೆ ಮಣಿದಿರುವ ರಾಜ್ಯ ಸರ್ಕಾರ, ವನ್ಯ ಜೀವಿ ಮಂಡಳಿ ಸದಸ್ಯರ ವಿರೋಧದ ನಡುವೆಯೂ ಹುಬ್ಭಳ್ಳಿ-ಅಂಕೋಲ ರೈಲ್ವೇ ಯೋಜನೆಗೆ ಹಸಿರು ನಿಶಾನೆ ತೋರಿದೆ. 

ಈ ನಿರ್ಧಾರದಿಂದಾಗಿ ರೈಲ್ವೆ ಮಾರ್ಗದ ಅನುಕೂಲ ಪಡೆಯುವವರಿಗೆ ಸಂತೋಷ ತಂದಿದ್ದರೆ, ಪರಿಸರ ಪ್ರಿಯರು ಪಶ್ಚಿಮ ಘಟ್ಟದ ದಟ್ಟ ಕಾನನದಲ್ಲಿ ಎರಡು ಲಕ್ಷ ಮರಗಳ ಹನನವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ 14ನೇ ವನ್ಯ ಜೀವಿ ಮಂಡಳಿ ಸಭೆಯಲ್ಲಿ ಯೋಜನೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಹುಬ್ಬಳ್ಳಿ-ಅಂಕೋಲ ರೈಲ್ವೆ ಯೋಜನೆಗೆ ಮರಗಳನ್ನು ಕಡಿಯುವುದರಿಂದ ಪರಿಸರ ವೈಪರೀತ್ಯಗಳು ಉಂಟಾಗಲಿವೆ. ಈ ರೀತಿಯ ಬೆಳವಣಿಗೆಯಿಂದ ಕೊಡಗು ಮತ್ತು ಕೇರಳ ರಾಜ್ಯದಲ್ಲಿ ಪ್ರವಾಹ ಉಂಟಾಗಿತ್ತು. ಈ ಯೋಜನೆಗೆ 2 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಬೇಕಾಗುತ್ತದೆ. ಕೇಂದ್ರ ಸರ್ಕಾರವೂ ಈ ಯೋಜನೆ ಜಾರಿಗೊಳಿಸುವುದು ಸರಿಯಲ್ಲ ಎಂದು ಹೇಳಿದೆ. ಜೊತೆಗೆ ಕೇಂದ್ರೀಯ ಉನ್ನತಾಧಿಕಾರ ಸಮಿತಿ ಈ ಯೋಜನೆ ಜಾರಿಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮಂಡಳಿ ಸದಸ್ಯರು ಹೇಳಿದ್ದಾರೆ. 

2 ದಶಕಗಳ ಹಿಂದೆ ಕೇಂದ್ರ ಸರ್ಕಾರ ರಾಜ್ಯದ ಉತ್ತರ ಮತ್ತು ಮಧ್ಯ ಭಾಗವನ್ನು ಕರಾವಳಿಗೆ ಸಂಪರ್ಕಿಸುವಂತಹ ಹುಬ್ಬಳ್ಳಿ-ಅಕೋಲ ರೈಲು ಮಾರ್ಗ ಯೋಜನೆಗೆ ಒಪ್ಪಿಗೆ ನೀಡಿತ್ತು. 164 ಕಿ ಮೀ ಉದ್ದದ ಈ ರೈಲು ಯೋಜನೆಗೆ 2000ರಲ್ಲಿ ಆಗಿನ ಪ್ರಧಾನಿಯಾಗಿದ್ದ ವಾಜಪೇಟಿ ಸಂಕು ಸ್ಥಾಪನೆ ನೆರವೇರಿಸಿದ್ದರು. ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯ ಇನ್ನಷ್ಟು ಕಾಡು ನಾಶವಾಗುತ್ತದೆ ಎಂದು ಶಿರಸಿಯ ಪರಿಸರ ಸಂರಕ್ಷಣಾ ಕೇಂದ್ರ ಮತ್ತು ಬೆಂಗಳೂರಿನ ಉತ್ತರ ಕನ್ನಡ ವೈಲ್ಡರ್ನೆಸ್ ಕ್ಲಬ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com