ವಿದೇಶದಿಂದ ಧಾರವಾಡಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 21ಕ್ಕೇರಿಕೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21ಕ್ಕೆ‌ಏರಿಕೆಯಾಗಿದೆ. ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ ಓರ್ವ ವ್ಯಕ್ತಿ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ವಿದೇಶದಿಂದ ಧಾರವಾಡಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 21ಕ್ಕೇರಿಕೆ
Updated on: 

ಧಾರವಾಡ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21ಕ್ಕೆ‌ಏರಿಕೆಯಾಗಿದೆ. ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ ಓರ್ವ ವ್ಯಕ್ತಿ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.


ವಿದೇಶ ಪ್ರವಾಸದಿಂದ ಆಗಮಿಸಿದ್ದ ಈ ವ್ಯಕ್ತಿಯು ಇದೇ ತಿಂಗಳು 12ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು. ಶಂಕಿತ ಕೋವಿಡ್ 19ರ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮೊನ್ನೆ 18ರಂದು ಅವರು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು.

ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಗೆ ಅನುಗುಣವಾಗಿ ಅದೇ ದಿನ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ ವಿಡಿಆರ್ ಎಲ್ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಪ್ರಯೋಗಾಲಯ ವರದಿ ಕೋವಿಡ್ 19 ಪಾಸಿಟಿವ್ ಎಂದು ಬಂದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com