ಭಗತ್ ಸಿಂಗ್, ಸುಖ್ ದೇವ್, ರಾಜ್ ಗುರು ಹುತಾತ್ಮ ದಿನ: ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ನಮನ

ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖ್‌ದೇವ್ ಹಾಗೂ ರಾಜ್‌ಗುರು ಅವರ ಹುತಾತ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.
ಸಾಂದರ್ಭಿಕ ಚಿತ್ರಗಳು
ಸಾಂದರ್ಭಿಕ ಚಿತ್ರಗಳು
Updated on

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖ್‌ದೇವ್ ಹಾಗೂ ರಾಜ್‌ಗುರು ಅವರ ಹುತಾತ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ಭಗತ್ ಸಿಂಗ್ ಅವರು, ಸುಖ್ ದೇವ್, ರಾಜ್ ಗುರು ಅವರೊಟ್ಟಿಗೆ ದೇಶದ ದಾಸ್ಯ ಮುಕ್ತಿಗಾಗಿ ನೇಣಿಗೆ ಕೊರಳೊಡ್ಡಿ ಹುತಾತ್ಮರಾದ ದಿನವಿದು. ಸ್ವಾತಂತ್ರ್ಯದೆಡೆಗಿನ ಅವರ ತುಡಿತ, ದೇಶಪ್ರೇಮ, ತ್ಯಾಗಗಳಿಗೆ ಕೋಟಿ ಕೋಟಿ ನಮನಗಳು ಎಂದು ತಿಳಿಸಿದ್ದಾರೆ.

ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಭಗತ್ ಸಿಂಗ್, ಸುಖ್‌ದೇವ್ ಥಾಪರ್ ಹಾಗೂ ಶಿವರಾಮ್ ರಾಜ್‌ಗುರುರಂತಹ ಈ ನೆಲದ ವೀರ  ಸೇನಾನಿಗಳ ತ್ಯಾಗ-ಬಲಿದಾನ, ನಿಸ್ವಾರ್ಥ ಚಿಂತನೆಗಳು ಇಂದಿನ ಸಮಾಜಕ್ಕೆ ಮಾದರಿಯಾಗಲಿ.  ಅವರ ಹುತಾತ್ಮ ದಿನದಂದು ನನ್ನ ಗೌರವಪೂರ್ವಕ ನಮನಗಳು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com