ಬಸವರಾಜ್ ಬೊಮ್ಮಾಯಿ
ಬಸವರಾಜ್ ಬೊಮ್ಮಾಯಿ

ಜನತೆ ನಿಯಮ ಪಾಲಿಸುತ್ತಿಲ್ಲ- ಬಸವರಾಜ್ ಬೊಮ್ಮಾಯಿ

ಮಹಾಮಾರಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 8 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ. ಆದಾಗ್ಯೂ, ಜನತೆ ನಿಯಮ ಪಾಲಿಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 8 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ. ಆದಾಗ್ಯೂ, ಜನತೆ ನಿಯಮ ಪಾಲಿಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಈ ಸೋಂಕು ಕಂಡುಬಂದಿರುವ  9 ಜಿಲ್ಲೆಗಳನ್ನು ಮಾಸಾಂತ್ಯದವರೆಗೂ  ಲಾಕ್ ಡೌನ್ ಮಾಡಿದೆ.  ಆದರೆ,  ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ರಾಜ್ಯದ ಜನತೆ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಸರ್ಕಾರದ ಆದೇಶ ಉಲ್ಲಂಘಿಸಿ ಜನತೆ ಮನೆಯಿಂದ ಹೊರಬರುತ್ತಿದ್ದು, ನಿಯಮ ಉಲ್ಲಂಘಿಸುತ್ತಿದ್ದಾರೆ.ಪೊಲೀಸರು ನಾಕಾ ಬಂದಿ ಹಾಕಬೇಕು, ಜನರು ಗುಂಪಾಗಿ ಸೇರದಂತೆ ಕ್ರಮ ಕೈಗೊಳ್ಳಬೇಕು, ಜನತೆ ಸರ್ಕಾರ ಸೂಚಿಸಿರುವ ಸಲಹೆಗಳನ್ನು  ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com