ಕೊರೋನಾ ವೈರಸ್ ದಿಗ್ಭಂದನಕ್ಕೆ ಕಟಗೇರಿ ಮಹಿಳಾ ಸಂಘದಿಂದ 10 ಸಾವಿರ ಮಾಸ್ಕ್ ತಯಾರಿ

ಕೊರೊನಾ ವೈರಸ್ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರ ಸುರಕ್ಷತೆ ಹಿತದೃಷ್ಠಿಯಿಂದ ಗ್ರಾಮ ಪಂಚಾಯಿತಿ ಮಹಿಳಾ ಒಕ್ಕೂಟಗಳಿಂದ ಮಾಸ್ಕ್ಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ತಿಳಿಸಿದರು.
ಕಟಗೇರಿ ಮಹಿಳಾ ಸಂಘಟನೆ
ಕಟಗೇರಿ ಮಹಿಳಾ ಸಂಘಟನೆ
Updated on: 

ಬಾಗಲಕೋಟೆ: ಕೊರೊನಾ ವೈರಸ್ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರ ಸುರಕ್ಷತೆ ಹಿತದೃಷ್ಠಿಯಿಂದ ಗ್ರಾಮ ಪಂಚಾಯಿತಿ ಮಹಿಳಾ ಒಕ್ಕೂಟಗಳಿಂದ ಮಾಸ್ಕ್ಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಓ ಅವರ ಕಚೇರಿಯಲ್ಲಿ ಪತ್ರಕರ್ತರಿಗೆ ಈ ವಿಷಯ ತಿಳಿಸಿದ ಅವರು ಜಿಲ್ಲೆಯಲ್ಲಿ ಒಟ್ಟು 125 ಒಕ್ಕೂಟಗಳು ಇದ್ದು, ಈ ಪೈಕಿ ಕೆಲವೊಂದ ಮಹಿಳಾ ಒಕ್ಕೂಟಗಳು ಜಿಲ್ಲೆಯಲ್ಲಿ ಮಾಸ್ಕ್ಗಳ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಡಿಮೆ ಬೆಲೆಯಲ್ಲಿ ಮಾಸ್ಕಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಮಾಸ್ಕ ತಯಾರಿಕೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಹೊಸಬೆಳಕು ಸಂಜೀವಿನಿ ಗ್ರಾಮ ಪಂಚಾಯತ ಒಕ್ಕೂಟ, ಬಾದಾಮಿ ತಾಲೂಕಿನ ಕಟಗೇರಿ ಗ್ರಾಮದ ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಗ್ರಾ.ಪಂ ಒಕ್ಕೂಟ, ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ದುರ್ಗಾಪರಮೇಶ್ವರಿ ಸಂಜೀವಿನಿ ಮಹಿಳಾ ಗ್ರಾ.ಪಂ ಒಕ್ಕೂಟ, ಗಲಗಲಿ ಗ್ರಾಮದ ಭಾರತಾಂಬೆ ಸಂಜೀವಿನಿ ಮಹಿಳಾ ಗ್ರಾ.ಪಂ ಒಕ್ಕೂಟಗಳು ಮಾಸ್ಕ ತಯಾರಿಕೆಯಲ್ಲಿ ತೊಡಗಿದ್ದು, ಇಲ್ಲಿವರೆಗೆ 10 ಸಾವಿರಕ್ಕೂ ಹೆಚ್ಚು ಮಾಸ್ಕಗಳನ್ನು ತಯಾರಿಸಿ ಮಾರಾಟ ಮಾಡಿದ್ದಾರೆ ಎಂದು ತಿಳಿಸಿದರು.

ವಿಶ್ವದೆಲ್ಲೆಡೆ ಕೋವಿಡ್-19 ಮಹಾಮಾರಿಯಿಂದ ರಕ್ಷಿಸಿಕೊಳ್ಳಲು ಹಲವು ವಿಧಾನಗಳಲ್ಲಿ ಮಾಸ್ಕ ಅವಶ್ಯವಾಗಿದ್ದರಿಂದ ಬೇಡಿಕೆ ಹೆಚ್ಚಾದ ಹಿನ್ನಲೆಯಲ್ಲಿ ಹೆಚ್ಚಾಗಿ ಜನರ ಕೈಗಳಿಗೆ ಸುಲಭವಾಗಿ ಸಿಗದಂತ ಸ್ಥಿತಿ ಉಂಟಾಗಿದೆ. ಇಂತಹ ಸ್ಥಿತಿಯಲ್ಲಿ ಗ್ರಾ.ಪಂ ಮಹಿಳಾ ಒಕ್ಕೂಟಗಳಿಂದ ಬೇಡಿಕೆಗೆ ತಕ್ಕಂತೆ ಮಾಸ್ಕ ತಯಾರಿಕೆಯಲ್ಲಿ ಮಹಿಳೆಯರು ನಿರತರಾಗಿದ್ದು, ಮಾಸ್ಕ ದೊರೆಯುವಲ್ಲಿ ನಮ್ಮ ಸೇವೆಯೂ ಇರಲಿ ಎಂದು ಮಾಸ್ಕ ತಯಾರಿಕಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ವತಿಯಿಂದ ದಾನಿಗಳ ಮೂಲಕ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದಿಂದ ಸೇರಿದಂತೆ ಇತರರಿಂದ ಮಾಸ್ಕ ತಯಾರಿಕೆಗೆ ಬೇಡಿಕೆ ಬಂದಿದ್ದು, ಕಳೆದ ನಾಲ್ಕೈದು ದಿನಗಳಿಂದ ಈ ಕಾರ್ಯ ನಡೆಸಲಾಗುತ್ತಿದೆ ಎಂದು ಮಹಿಳಾ ಒಕ್ಕೂಟದ ಪ್ರತಿನಿಧಿಗಳು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಪತ್ರಕರ್ತರು, ಸಂಪಾದಕರಿಗೆ 100 ಮಾಸ್ಕ್ಗಳನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ವಿತರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com