ಊರುಗಳಿಗೆ ಹೋಗಲು ಇಂದು ರಾತ್ರಿವರೆಗೆ ಅವಕಾಶ, ನಾಳೆಯಿಂದ ಲಾಕ್‌ಡೌನ್ ಮತ್ತಷ್ಟು ಬಿಗಿ: ಸಿಎಂ ಯಡಿಯೂರಪ್ಪ

ಕೊರೋನಾ ಸೋಂಕು ತಡೆ ಉದ್ದೇಶದಿಂದ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಲಾಕ್‌ಡೌನ್‌ ನಾಳೆಯಿಂದ ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ
ಸಿಎಂ ಬಿಎಸ್ ಯಡಿಯೂರಪ್ಪ
Updated on: 

ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಲಾಕ್ ಡೌನ್ ತೀರ್ಮಾವನ್ನು ಬುಧವಾರದಿಂದ ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶ ಉಲ್ಲಂಘಿಸುವವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಸರ್ಕಾರದ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲವಾದಲ್ಲಿ ಕ್ರಮ ಖಚಿತ ಎಂದರು. 

ಲಾಕ್ಡೌನ್ ಮತ್ತಷ್ಟು ಬಿಗಿಗೊಳಿಸುತ್ತಿದ್ದು, ಇಂದು ರಾತ್ರಿ ವರೆಗೆ ಮಾತ್ರ ಸಾರ್ವಜನಿಕರಿಗೆ ಊರಿಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರಿಗೆ ಬರಲು, ಬೆಂಗಳೂರಿನಂದ ಊರಿಗೆ ಹೋಗಲು ಇಂದು ಅವಕಾಶ ನೀಡಲಾಗಿದೆ. ಬೆಂಗಳೂರಿಗೆ ಬರುವವರು ಇಂದು ರಾತ್ರಿಯೊಳಗೆ ಬರಬೇಕು. ನಾಳೆಯಿಂದ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com