ಕೋವಿಡ್ ಪರಿಹಾರ ನಿಧಿಗೆ ಉದಾರ ದೇಣಿಗೆ ನೀಡುವಂತೆ ಸಿಎಂ ಯಡಿಯೂರಪ್ಪ ಮನವಿ

ಕೊರೋನಾ ವೈರಾಣು ನಿಯಂತ್ರಣಕ್ಕೆ ಸರ್ಕಾರದೊಂದಿಗೆ  ಕೈಜೋಡಿಸುವಂತೆ ಮನವಿ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on

ಬೆಂಗಳೂರು: ಕೊರೋನಾ ವೈರಾಣು ನಿಯಂತ್ರಣಕ್ಕೆ ಸರ್ಕಾರದೊಂದಿಗೆ  ಕೈಜೋಡಿಸುವಂತೆ ಮನವಿ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ಕೊರೋನಾ ಎಂಬ ವೈರಾಣು ವಿಶ್ವದೆಲ್ಲೆಡೆ ಹರಡುತ್ತಿರುವ ಸಾಂಕ್ರಾಮಿಕ ರೋಗದಿಂದ ಗಣನೀಯ ಪ್ರಮಾಣದಲ್ಲಿ ಜನರು ಸಾವಿಗೀಡಾಗುತ್ತಿದ್ದು, ಈ ಸಾಂಕ್ರಾಮಿಕ ರೋಗವು ಕರ್ನಾಟಕ ರಾಜ್ಯದಲ್ಲೂ  ಕಂಡುಬಂದಿದೆ. ಈ ರೋಗವನ್ನು ತಡೆಗಟ್ಟಲು ಸರ್ಕಾರವು ಯುದ್ಧೋಪಾದಿಯಲ್ಲಿ ಕ್ರಮಕೈಗೊಳ್ಳುತ್ತಿದ್ದು, ಈವೈರಾಣು ಹರಡುವುದನ್ನು ನಿಯಂತ್ರಿಸಲು ಮಹತ್ವದ ನಿರ್ಧಾರಗಳನ್ನು ಕೈಗೊಂಡಿರುತ್ತದೆ. ಈ ರೋಗದಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರಗಳನ್ನು ಸರ್ಕಾರದ ವತಿಯಿಂದ ಮಾಡಿಸಲಾಗುತ್ತಿದ್ದು, ರೋಗವನ್ನು ಪತ್ತೆ ಹಚ್ಚಲು ಹೆಚ್ಚಿನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿರುತ್ತದೆ.

ಈ ಎಲ್ಲಾ ಸರ್ಕಾರದ ಕಾರ್ಯತಂತ್ರಗಳನ್ನು  ಮನಗಂಡು ಈ ವೈರಾಣು ಹರಡುವುದನ್ನು ತಡೆಗಟ್ಟಲು ತಾವು ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಹಾಗೂ ಕಾಲ ಕಾಲಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಸೂಚನೆಗಳನ್ನು ಪಾಲಿಸಬೇಕೆಂದು ವಿನಂತಿಸಿದೆ. ಈ ಕಾರ್ಯಕ್ಕಾಗಿ ದೇಣಿಗೆ ಸಲ್ಲಿಸಲು ಇಚ್ಛಿಸಲು ದಾನಿಗಳು ಈ ಕೆಳಗಿನ ಅಧಿಕೃತ ಬ್ಯಾಂಕ್ ಖಾತೆಗೆ ದೇಣಿಗೆಯನ್ನು ಸಲ್ಲಿಸಬಹುದು. ಈ ಖಾತೆಗೆ ಧನಾದೇಶ/ಬೇಡಿಕೆ ಹುಂಡಿ/ ವಿದ್ಯುನ್ಮಾನ ಮೂಲಕ ದೇಣಿಗೆ ಸಲ್ಲಿಸಬಹುದು.

ಖಾತೆಯ ಹೆಸರು: Chief Minister Relief Fund Covid-19 
ಬ್ಯಾಂಕ್ ಹೆಸರು: SBI (State Bank oF India)
ಶಾಖೆ: Vidhana soudha Branch
ಖಾತೆ ಸಂಖ್ಯೆ; 39234923151, ಐಎಫ್ ಎಸ್ ಸಿ ಕೋಡ್: SBIN0040277, ಎಂಐಸಿಆರ್ ಸಂಖ್ಯೆ 560002419, ಚೆಕ್ ಮತ್ತು ಡಿಡಿ ಕಳುಹಿಸಬೇಕಾದ ವಿಳಾಸ: ನಂ.235-ಎ, 2ನೆ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು-560001 
ಈ ರೀತಿ ಸಲ್ಲಿಸುವ ದೇಣಿಗೆಗೆ, ಆದಾಯ ತೆರಿಗೆ ಕಾಯ್ದೆ 80 ಜಿ(2)ರಡಿ ತೆರಿಗೆ ವಿನಾಯಿತಿ ಇದೆ. ಆದಾಯ ತೆರಿಗೆ ವಿನಾಯಿತಿ ಪಡೆಯಲು PAN NO.AAAGC1692P ಅಥವಾ GGGGG0000G ಅನ್ನು ಬಳಸಬಹುದು ಎಂದು ಮುಖ್ಯಮಂತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com