ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್: ಅಗತ್ಯ ಸೇವೆಗೆ ಮಾತ್ರ ಬಿಎಂಟಿಸಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಇಂದಿನಿಂದ ಅಗತ್ಯ ಸೇವೆ ನೀಡುವವರಿಗಾಗಿ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳು ಕಾರ್ಯನಿರ್ವಹಿಸಲಿವೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ
Updated on

ಬೆಂಗಳೂರು: ಇಂದಿನಿಂದ ಅಗತ್ಯ ಸೇವೆ ನೀಡುವವರಿಗಾಗಿ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳು ಕಾರ್ಯನಿರ್ವಹಿಸಲಿವೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನಿಂದ ಬಿಎಂಟಿಸಿ ಸೇವೆ ಇರುವುದು ಜನಸಾಮಾನ್ಯರಿಗಲ್ಲ. ಕೇವಲ ಅವಶ್ಯಕ ಸೇವೆಗಳ ನೌಕರರಿಗೆ ಮಾತ್ರ. ಜೊತೆಗೆ, ವೈದ್ಯರು, ದಾದಿಯರು, ಆಸ್ಪತ್ರೆ ನೌಕರರು, ಸೆಕ್ಯೂರಿಟಿ ಗಾರ್ಡ್‌ಗಳು, ಬ್ಯಾಂಕ್ ಉದ್ಯೋಗಿಗಳು, ಹಾಗೂ  ಮಾಧ್ಯಮದವರಿಗೆ ಮಾತ್ರಈ ಬಿಎಂಟಿಸಿಯಲ್ಲಿ ಪ್ರಯಾಣಿಸಲು ಸಾಧ್ಯ. ಯಾವುದೇ ಕಾರಣಕ್ಕೂ ಮನೆಯಿಂದ ಜನಸಾಮಾನ್ಯರು ಹೊರಗೆ ಬರಬೇಡಿ ಎಂದು ತಿಳಿಸಿದ್ದಾರೆ.

ಪ್ರತಿ ಬಸ್ಸಿನಲ್ಲಿ ಗರಿಷ್ಠ 20 ಜನ ಮಾತ್ರ ಪ್ರಯಾಣಿಸಬಹುದಾಗಿರುತ್ತದೆ. ಬಸ್ಸನ್ನು ಚಲಾಯಿಸುವ ಎಲ್ಲ ಚಾಲಕ ನಿರ್ವಹಕರುಗಳಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಪ್ರತಿಯೊಂದು ವಾಹನದಲ್ಲಿ 20 ಕ್ಕಿಂತ ಮೀರದಂತೆ ಪ್ರಯಾಣಿಕರು. ಪೊಲೀಸ್  ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ, ಮೆಡಿಕಲ್ ಶಾಪ್, ಕಾರ್ಪೊರೇಷನ್, ಮೆಟ್ರೋ ಸಿಬ್ಬಂದಿ, ಖಾಸಗಿ ಸೆಕ್ಯೂರಿಟಿ ಗಾರ್ಡ್,ಬ್ಯಾಂಕ್ ಸಿಬ್ಬಂದಿ, ರಕ್ತ ದಾನಿಗಳು, ಅಲ್ಲದೆ ಆಸ್ಪತ್ರೆಗೆ ಭೇಟಿ ನೀಡುವ ನಾಗರೀಕರು, ರೋಗಿಗಳನ್ನು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇವರಲ್ಲದೆ ಪೊಲೀಸ್ ಇಲಾಖೆಯಿಂದ ಪಾಸ್ ಪಡೆದಿರುವ ಅಂಗಡಿ ಕಾರ್ಮಿಕರು, ಡೆಲಿವರಿ ಹುಡುಗರು, ಪೆಟ್ರೋಲ್ ಬಂಕ್ ಸಿಬ್ಬಂದಿ, ಹೋಟೆಲ್ ಸಿಬ್ಬಂದಿಯನ್ನು ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದೆಲ್ಲೆಡೆ ಕೊರೊನ ಮಹಾಮಾರಿಯನ್ನು ತಡೆಯ್ಯುವ ಪ್ರಯುಕ್ತ ಲಾಕ್  ಡೌನ್ ಘೋಷಿಸಿದೆ.ಇದರ ನಡುವೆ ತುರ್ತು ಸೇವೆಗಳ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಬಿಎಂಟಿಸಿ ಯ ಬಸ್ಸುಗಳನ್ನು ಕಾರ್ಯಾಚರಣೆ ಗೊಳಿಸಲಾಗುತ್ತಿದೆ. ಸದರಿ ಸೇವೆಯು ತುರ್ತು ಸೇವೆಗಳ ಸೌಲಭ್ಯಗಳನ್ನು ಒದಗಿಸುವ ಸಿಬ್ಬಂದಿಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಈ ಸೇವೆ  ಪಡೆಯಲು ಪೊಲೀಸ್ ಸಂಸ್ಥೆ ವಿತರಿಸಿರುವ ಗುರುತಿನ ಚೀಟಿ ಅತ್ಯಾವಶ್ಯವಾಗಿರುತ್ತದೆ. ದಯವಿಟ್ಟು ಸಾರ್ವಜನಿಕರು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಸಹಕರಿಸಬೇಕಾಗಿ ವಿನಂತಿಸುತ್ತೇನೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com