ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭ: ಸಾರ್ವಜನಿಕರಿಗೆ ಅವಕಾಶವಿಲ್ಲ, 1 ಬಸ್ ನಲ್ಲಿ 20 ಜನರಿಗೆ ಮಾತ್ರ ಅವಕಾಶ

ಕೊರೋನಾ ಭೀತಿ ಹಿನ್ನೆಲೆಯಲ್ಲಿ ನಗರದಲ್ಲಿನ ಸಂಚಾರವನ್ನು ಬಂದ್ ಮಾಡಿದ್ದ ಬಿಎಂಟಿಸಿ ಇದೀಗ ಮತ್ತೆ ತನ್ನ ಸಂಚಾರವನ್ನು ಆರಂಭಿಸಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕೊರೋನಾ ಭೀತಿ ಹಿನ್ನೆಲೆಯಲ್ಲಿ ನಗರದಲ್ಲಿನ ಸಂಚಾರವನ್ನು ಬಂದ್ ಮಾಡಿದ್ದ ಬಿಎಂಟಿಸಿ ಇದೀಗ ಮತ್ತೆ ತನ್ನ ಸಂಚಾರವನ್ನು ಆರಂಭಿಸಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಿದೆ.

ನಗರದಲ್ಲಿ ಈಗಾಗಲೇ 180  ಬಸ್ ಗಳು ಸಂಚಾರ ಆರಂಭಿಸಿದ್ದು, 1 ಬಸ್ ನಲ್ಲಿ 20 ಜನರಿಗೆ ಮಾತ್ರ ಅವಕಾಶ  ನೀಡಲಾಗುತ್ತಿದೆ. 

ಬ್ಯಾಂಕ್ ನೌಕರರು, ರಕ್ತದಾನ ಮಾಡುವವರು, ಪೊಲೀಸರು, ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಸೇವೆ, ಪತ್ರಕರ್ತರು, ಭದ್ರತಾ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಸಿಬ್ಬಂದಿಗಳು ಐಡಿಕಾರ್ಡ್ ತೋರಿಸಿ, ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com