ಬೆಂಗಳೂರಿನಲ್ಲಿ 31 ಫೀವರ್ ಕ್ಲಿನಿಕ್ ಸ್ಥಾಪನೆ: ಇಂದಿನಿಂದ ಕಾರ್ಯಾರಂಭ

ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ 31 ಫೀವರ್ ಕ್ಲಿನಿಕ್ ಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ 31 ಫೀವರ್ ಕ್ಲಿನಿಕ್ ಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. 

ನಿನ್ನೆಯಷ್ಟೇ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮುಂದಿನ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಕೆಲ ನಿರ್ದೇಶನಗಳನ್ನು ನೀಡಿದ್ದಾರೆ, 

ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು. ಇಡೀ ರಾಜ್ಯದಲ್ಲಿ ಖಾಸಗಿ ಕ್ಲಿನಿಕ್ ಗಳನ್ನು ಬಂದ್ ಮಾಡುವ ಹಾಗಿಲ್ಲ. ಕ್ಲಿನಿಕ್ ಬಂದ್ ಮಾಡುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದಾರೆ. 

ಅಲ್ಲದೆ, ಬ್ಯಾಂಕ್ ಸಾಲ ಮತ್ತು ಕಿರು ಹಣಕಾಸು ಸಂಸ್ಥೆಗಳ ಸಾಲದ ಕಂತು ಪಾವತಿ ಮುಂದೂಡಲು ಕ್ರಮವಹಿಸಬೇಕು. ರೈತರಿಗೆ ಅಗತ್ಯವಾದ ಕೀಟನಾಶಕ, ರಸಗೊಬ್ಬರ ಮತ್ತಿತರ ಕೃಷಿ, ಪರಿಕರಗಳು ಲಭ್ಯವಾಗುವಂತೆ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಖರ್ಚು ಮಾಡಬೇಕು. ಎಲ್ಲಾ ಡಿಸಿಗಳು ತಮ್ಮ ವ್ಯಾಪ್ತಿಯ ವೈದ್ಯ ಕಾಲೇಜುಗಳ ಸಹಕಾರ ಪಡೆದುಕೊಳ್ಳಬೇಕೆಂದು ನಿರ್ದೇಶನ ನೀಡಿದ್ದಾರೆ. 

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯ ಸರ್ಕಾರವು 3ಟಿ (ಟ್ರೇಸ್-ಟೆಸ್ಟ್ ಆ್ಯಂಡ್ ಟ್ರೀಟ್ಮೆಂಟ್) ಸೂತ್ರವನ್ನು ಅಳವಡಿಸಿಕೊಂಡಿದೆ. ಇದರ ಅನ್ವಯ ರೋಗ ಪತ್ತೆ, ವೈರಾಣು ಪರೀಕ್ಷೆ ಹಾಗೂ ಸೋಂಕು ದೃಢಪಟ್ಟಲ್ಲಿ ಚಿಕಿತ್ಸೆ ನೀಡಲಾಗುವುದು. 10 ವರ್ಷ ವಯೋಮಾನದ ಮಕ್ಕಳು ಮತ್ತು 60 ವರ್ಷ ವಯೋಮಾನದ ಮೀರಿದ ವೃದ್ಧರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬಾರದು ಎಂದು ಮನವಿ ಮಾಡಿಕಂಡರು, 

ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ 31 ಫೀವರ್ ಕ್ಲಿನಿಕ್ ಗಳು ಶುಕ್ರವಾರದಿಂದ ಕಾರ್ಯ ಆರಂಭಿಸಲಿವೆ. ಕಳೆದ 2 ತಿಂಗಳಲ್ಲಿ ವಿದೇಶಗಳಿಂದ ಬೆಂಗಳೂರಿಗೆ ಆಗಮಿಸಿ, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿರುವವರು ಈ ಚಿಕಿತ್ಸಾಲಯಗಳಿಗೆ ತೆರಳಿ ಆರೋಗ್ಯ ತಪಾಸಣೆಗೆ ಒಳಗಾಗಬಹುದುದಾಗಿದೆ. ಮುಂದಿನ 10 ದಿನಗಳಲ್ಲಿ 25 ಸಾವಿರದಿಂದ 30 ಸಾವಿರ ಜನರನ್ನು ಈ ಚಿಕಿತ್ಸಾಲಯಗಳಿಗೆ ತಪಾಸಣೆಗೊಳಪಡಿಸಲಾಗುವುದು. ಜ21ರಿಂದ 1 ಲಕ್ಷದ 25 ಸಾವಿರ ಮಂದಿ ಬೆಂಗಳೂರಿಗೆ ವಿದೇಶಗಳಿಂದ ಆಗಮಿಸಿದ್ದು, ಅವರೆಲ್ಲರ ಪ್ರವಾಸಿ ಚರಿತ್ಸೆ ಸರ್ಕಾರದಲ್ಲಿ ಲಭ್ಯವಿದೆ. ಅದರೆ, ಅವರಲ್ಲಿ ಕೇವಲ 1500 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಗುರಿಪಡಿಸಲಾಗಿತ್ತು. ಇದೀಗ ವಿದೇಶಗಳಿಂದ ಆಗಮಿಸಿರುವ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸುವ ಮೂಲಕ ವ್ಯಕ್ತಿಯಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಆತಂಕ ನಿವಾರಣೆಯಾಗಲಿದೆ ಎಂದು ವಿವರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com