ಫೀವರ್ ಕ್ಲಿನಿಕ್ ಗಳಾಗಿ ಪರಿವರ್ತನೆಗೊಂಡ 53 ಪ್ರಾಥಮಿಕ ಆರೋಗ್ಯ ಕೇಂದ್ರಗಳು

ನಗರದಲ್ಲಿರುವ 53 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಫೀವರ್ ಕ್ಲಿನಿಕ್ ಗಳಾಗಿ ಪರಿವರ್ತನೆಗೊಳಿಸುವ ಕಾರ್ಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಆರಂಭಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಗರದಲ್ಲಿರುವ 53 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಫೀವರ್ ಕ್ಲಿನಿಕ್ ಗಳಾಗಿ ಪರಿವರ್ತನೆಗೊಳಿಸುವ ಕಾರ್ಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಆರಂಭಿಸಿದ್ದಾರೆ. 

ನಗರದಲ್ಲಿ 31 ಫೀವರ್ ಕೇಂದ್ರಗಳನ್ನು ಆರಂಭಿಸುವುದಾಗಿ ಕೆಲ ದಿನಗಳ ಹಿಂದಷ್ಟೇ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದರು. 

ಈ ಹಿನ್ನೆಲೆಯಲ್ಲಿ ನಗರದಲ್ಲಿರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಫೀವರ್ ಕೇಂದ್ರಗಳನ್ನಾಗಿ ಪರಿವರ್ತಿಸುವ ಕಾರ್ಯಗಳನ್ನು ಅಧಿಕಾರಿಗಳು ಆರಂಭಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಕಾರ್ಯಕ್ಕೆ ನಿಯೋಜಿಸಲಾಗುತ್ತಿದೆ. ಈ ಶಿಕ್ಷಕರು ವೈರಸ್ ದೃಢಪಟ್ಟ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವ ಜನರನ್ನು ಹುಡುಕುವ ಕಾರ್ಯಗಳನ್ನು ಮಾಡಲಿದ್ದಾರೆ. 

ರಾಜ್ಯದಲ್ಲಿ ವೈರಸ್ ಪತ್ತೆಯಾದಾಗಿನಿಂದಲೂ ವಿದೇಶದಿಂದ ನಗರಕ್ಕೆ 1.53 ಲಕ್ಷ ಜನರು ಆಗಮಿಸಿದ್ದು, ಅವರನ್ನು ಹುಡುಕುವ ಕಾರ್ಯವನ್ನು ಈ ತಂಡಗಳು ಮಾಡಲಿವೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. 

ಪ್ರತೀತಂಡದಲ್ಲಿಯೂ ಪ್ಯಾರಾಮೆಡಿಕಲ್ ಸಿಬ್ಬಂದಿ ಹಾಗೂ ಶಿಕ್ಷಕರು ಇರಲಿದ್ದಾರೆ. 20 ತಂಡಗಳಿಗೆ ಒಬ್ಬರು ಮುಖ್ಯಸ್ಥರಿರಲಿದ್ದಾರೆ. ಈ ಅಧಿಕಾರಿಘಳು ಆರೋಗ್ಯ ಇಲಾಖೆಯ ಆಯುಕ್ತರಿಗೆ ವರದಿ ಸಲ್ಲಿಸಲಿದ್ದಾರೆ. ಬಿಬಿಎಂಪಿಯಲ್ಲಿ ನಾಲ್ಕು ವಿಶೇಷ ಆಯುಕ್ತರಿರಲಿದ್ದು, ಅವರು ಕೂಡ ಈ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಮುಖ್ಯಸ್ಥರು ಹಾಗೂ ವಿಶೇಷ ಆಯುಕ್ತರು ನೀಡುವ ನಿರ್ದೇಶನದಂತೆ ಬಿಬಿಎಂಪಿ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಅಧಿಕಾರಿಗಳಿಗೆ ಹಾಗೂ ತಂಡದವರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಹಾಗೂ ಮೂಲಭೂತ ಸೌಕರ್ಯಗಳನ್ನು ಬಿಬಿಎಂಪಿ ಕಲ್ಪಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com