ಕೊರೋನಾ ಭೀತಿ: ಮೇಲುಕೋಟೆ ವೈರಮುಡಿ ಉತ್ಸವ ರದ್ದು

ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ವೈರಸ್ ನ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಮೇಲುಕೋಟೆಯ ವೈರ ಮುಡಿ ಉತ್ಸವವನ್ನು ರದ್ದುಪಡಿಸಲಾಗಿದೆ
ವೈರಮುಡಿ ಉತ್ಸವ
ವೈರಮುಡಿ ಉತ್ಸವ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ವೈರಸ್ ನ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಮೇಲುಕೋಟೆಯ ವೈರ ಮುಡಿ ಉತ್ಸವವನ್ನು ರದ್ದುಪಡಿಸಲಾಗಿದೆ

ಒಂದೇ ಕಡೆ ನೂರಕ್ಕೂ ಹೆಚ್ಚು ಜನ ಸೇರದಂತೆ ಸರ್ಕಾರ ಸ್ಪಷ್ವವಾಗಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವೈರ ಮುಡಿ ಉತ್ಸವವನ್ನು ರದ್ದುಪಡಿಸಲು ಜಿಲ್ಲಾಡಳಿತ ತೀರ್ಮಾನ ಕೈಗೊಂಡಿದೆ.

ಈ ಮಧ್ಯೆ ಸುದ್ದಿಗಾರರ ಜತೆಮಾತನಾಡಿದ ಪೌರಾಡಳಿತ ಸಚಿವ ನಾರಾಯಣಗೌಡ, ಈವರೆಗೆ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಕಂಡು ಬಂದಿಲ್ಲ. ಇದು ಒಳ್ಳೆಯ ಬೆಳವಣಿಗೆಯಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿರುವ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಅಭಿನಂದಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com