'ಹೊರಗಡೆ ಬಂದು ಸೀನಿ, ಕೊರೋನಾ ವೈರಸ್ ಹರಡಿ’ 

ಬೆಂಗಳೂರು: ‘ಹೊರಗಡೆ ಬಂದು ಸೀನಿ, ವೈರಸ್ ಹರಡಿ’ ಎಂದು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದ ಸಾಫ್ಟ್‌ವೇರ್‌ ಎಂಜಿನಿಯರ್ ಮುಜೀಬ್ ಮೊಹಮ್ಮದ್ (34) ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಮಹದೇವಪುರ ಸಮೀಪದ ಎ. ನಾರಾಯಣಪುರದ ಮುಜೀಬ್, ಇನ್ಫೊಸಿಸ್ ಕಂಪನಿಯಲ್ಲಿ ಹಿರಿಯ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ‘ಹೊರಗಡೆ ಬಂದು ಸೀನಿ, ವೈರಸ್ ಹರಡಿ’ ಎಂದು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದ ಸಾಫ್ಟ್‌ವೇರ್‌ ಎಂಜಿನಿಯರ್ ಮುಜೀಬ್ ಮೊಹಮ್ಮದ್ (34)
ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‘ಮಹದೇವಪುರ ಸಮೀಪದ ಎ. ನಾರಾಯಣಪುರದ ಮುಜೀಬ್, ಇನ್ಫೊಸಿಸ್ ಕಂಪನಿಯಲ್ಲಿ ಹಿರಿಯ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ತಿಂಗಳಿಗೆ ₹1.40 ಲಕ್ಷ ಸಂಬಳ ಪಡೆಯುತ್ತಿದ್ದ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಕೊರೊನಾ ವೈರಾಣು ಜನರಲ್ಲಿ ಭೀತಿಯನ್ನುಂಟು ಮಾಡಿದ್ದು, ಇದರ ತಡೆಗೆ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ. ಇಂಥ ಸಂದರ್ಭದಲ್ಲೇ ಆರೋಪಿ ಜನರನ್ನು ಪ್ರಚೋದಿಸುವ ಪೋಸ್ಟ್‌ ಅನ್ನು ಫೇಸ್‌ಬುಕ್‌ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾನೆ’ ಎಂದರು.

‘Spread the word to end the word’ ಎಂದು ತನ್ನ ಫೋಟೊ ಸಮೇತವೇ ಆರೋಪಿ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಹಾಕಿದ್ದ. ಆ ಬಗ್ಗೆ ಸಾರ್ವಜನಿಕರೊಬ್ಬರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಕೆಲ ಗಂಟೆಯಲ್ಲೇ  ಆರೋಪಿಯನ್ನು ಬಂಧಿಸಿದ್ದಾರೆ’ ಎಂದು ತಿಳಿಸಿದರು.

‘ಆರೋಪಿ ಕೃತ್ಯದ ಬಗ್ಗೆ ಕಂಪನಿ ಆಡಳಿತ ಮಂಡಳಿಗೂ ಮಾಹಿತಿ ನೀಡಲಾಗಿದೆ. ಲಾಕ್‌ಡೌನ್‌ನಿಂದಾಗಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿತ್ತು. ಮುಜೀಬ್ ಸಹ ಅದೇ ರೀತಿಯಲ್ಲೇ ಮನೆಯಿಂದ ಕೆಲಸ ಮಾಡುತ್ತಿದ್ದ. ಇದೇ ಸಂದರ್ಭದಲ್ಲೇ ಪೋಸ್ಟ್ ಅಪ್‌ಲೋಡ್ ಮಾಡಿದ್ದ’ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com