ಬೆಳಗಾವಿಯಲ್ಲಿ ಕೊರೋನಾ ಸ್ಫೋಟ: 69 ಕ್ಕೇರಿದ ಸೋಂಕಿತರ ಸಂಖ್ಯೆ; ಆತಂಕದಲ್ಲಿ ಜನತೆ

ಒಂದೇ ದಿನ ಹತ್ತಕ್ಕೂ ಹೆಚ್ಚು ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗುವ ಮೂಲಕ ಬೆಳಗಾವಿ ಜಿಲ್ಲೆ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ. ಜನ ಮತ್ತಷ್ಟು ಆತಂಕಕ್ಕೊಳಗಾಗುವಂತೆ ಮಾಡಿದೆ. ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗುವ ಮೂಲಕ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಒಂದೇ ದಿನ ಹತ್ತಕ್ಕೂ ಹೆಚ್ಚು ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗುವ ಮೂಲಕ ಬೆಳಗಾವಿ ಜಿಲ್ಲೆ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ. ಜನ ಮತ್ತಷ್ಟು ಆತಂಕಕ್ಕೊಳಗಾಗುವಂತೆ ಮಾಡಿದೆ. ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗುವ ಮೂಲಕ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ.

ಗುರುವಾರ ಒಟ್ಟು 14 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಬೆಳಗಾವಿಯಲ್ಲಿ ಒಂದೇ ದಿನ 17 ಪಾಸಿಟಿವ್‌ ಬಂದಿತ್ತು. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಈಗ 69ಕ್ಕೆ ಏರಿಕೆಯಾಗಿದೆ. ಗುರುವಾರದ ಆರೋಗ್ಯ ಇಲಾಖೆ ವರದಿ ಪ್ರಕಾರ ಪ್ರಕಟವಾದ ಒಟ್ಟು 14 ಸೋಂಕಿತರ ಪೈಕಿ ಬೆಳಗಾವಿ ತಾಲೂಕಿನ  ಹಿರೇಬಾಗೇವಾಡಿ ಗ್ರಾಮದಲ್ಲಿಯೇ 11 ಪ್ರಕರಣಗಳು ಕಂಡು ಬಂದಿವೆ.

ಹಿರೇಬಾಗೇವಾಡಿ ಗ್ರಾಮದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಗ್ರಾಮಸ್ಥರ ತೀವ್ರ ಆತಂಕಕ್ಕೆ ಕಾರಣವಾಗುತ್ತಿದೆ. ಸೋಂಕಿತರಲ್ಲಿ 5 ಮಹಿಳೆಯರು, ಓರ್ವ ಬಾಲಕಿ ಸೇರಿದ್ದಾರೆ. ಮೂಲ ಸೋಂಕಿತನ ಕುಟುಂಬದ ಸದಸ್ಯರು, ಸಂಬಂಧಿಕರ ಜತೆಗೆ ಈಚೆಗೆ ನಿವೃತ್ತ ಪೊಲೀಸ್‌ ಕಾನಸ್ಟೇಬಲ್‌ ಮತ್ತು ಅಂಗನವಾಡಿ ಕಾರ್ಯಕರ್ತೆಗೂ ಸೋಂಕು
ತಗುಲಿತ್ತು. ಈ  ಕಾರಣಕ್ಕೆ, ಸೋಂಕಿತರ ಸಂಪರ್ಕದಲ್ಲಿರುವ ಆರೋಗ್ಯ, ಪೊಲೀಸ್‌ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ 400ಕ್ಕೂ ಅಧಿಕ ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಹುಕ್ಕೇರಿ ತಾಲೂಕಿನ ಸಂಕೇಶ್ವರಕ್ಕೂ ಸೋಂಕು ಅಂಟಿಕೊಂಡಿದ್ದರಿಂದ ಅಲ್ಲೂ ಒಂದೊಂದೇ ಪ್ರಕರಣ ಪತ್ತೆಯಾಗುತ್ತಿವೆ. ಗುರುವಾರ ಒಂದೇ ದಿನ ಅಲ್ಲಿ ಮೂರು ಪ್ರಕರಣ ದಾಖಲಾಗಿದೆ.  75 ವರ್ಷದ ಮಹಿಳೆ ಮತ್ತು ಇಬ್ಬರು ಬಾಲಕಿಯರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com