ಮದ್ಯ ಮಾರಾಟದ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರವೇ ಅಂತಿಮ: ಆರ್. ಅಶೋಕ್

ಮದ್ಯ ಮಾರಾಟ ವಿಚಾರವನ್ನು ಸಿಎಂ ಬಿಎಸ್ ಯಡಿಯೂರಪ್ಪನವರೇ ನಿರ್ಧರಿಸುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಮದ್ಯ ಮಾರಾಟ ಅನುಮತಿಯ ಕುರಿತು ಸೂಕ್ತ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಅಶೋಕ್ ಹೇಳಿದ್ದಾರೆ.
ಆರ್.ಅಶೋಕ್
ಆರ್.ಅಶೋಕ್
Updated on

ಬೆಂಗಳೂರು: ಮದ್ಯ ಮಾರಾಟ ವಿಚಾರವನ್ನು ಸಿಎಂ ಬಿಎಸ್ ಯಡಿಯೂರಪ್ಪನವರೇ ನಿರ್ಧರಿಸುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಮದ್ಯ ಮಾರಾಟ ಅನುಮತಿಯ ಕುರಿತು ಸೂಕ್ತ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್ ಇಂದಿನ ಸಂಪುಟದ ಸಚಿವರ ಜೊತೆಗಿನ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಮದ್ಯ ಮಾರಾಟದ ಬಗ್ಗೆ ಚರ್ಚಿಸಿಲ್ಲ. ಮೇ 4ರಂದು ಅವರು ಈ ಕುರಿತು ತೀರ್ಮಾನಕ್ಕೆ ಬರಲಿದ್ದಾರೆ ಎಂದರು. 

ರಾಜ್ಯದ ಯಾವೆಲ್ಲಾ ಕಡೆ ಮದ್ಯ ಮಾರಾಟಕ್ಕೆ ಅವಕಾಶ? ಮಾರಾಟದ ಹಿನ್ನೆಲೆ ಯಾವ ಎಚ್ಚರಿಕೆ ತೆಗೆದುಕೊಳ್ಳಬೇಕು? ಎಲ್ಲ ತೀರ್ಮಾನವನ್ನು ಸ್ವತಃ ಸಿಎಂ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com