ಹೊಸಪೇಟೆ: ಹಳೇ ತಹಶೀಲ್ದಾರ್ ಕಚೇರಿಗೆ ಬೆಂಕಿ, ಅಪಾರ ಪ್ರಮಾಣದ ದಾಖಲೆ ಸುಟ್ಟು ಭಸ್ಮ

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಳೇ ತಹಶೀಲ್ದಾರ್ ಕಚೇರಿಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ದಾಖಲೆ ಸುಟ್ಟು ಭಸ್ಮವಾಗಿರುವ ಘಟನೆ ಇಂದು ನಡೆದಿದೆ
ಹೊಗೆಯ ಚಿತ್ರ
ಹೊಗೆಯ ಚಿತ್ರ
Updated on: 

ಹೊಸಪೇಟೆ: ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಳೇ ತಹಶೀಲ್ದಾರ್ ಕಚೇರಿಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ದಾಖಲೆ ಸುಟ್ಟು ಭಸ್ಮವಾಗಿರುವ ಘಟನೆ ಇಂದು ನಡೆದಿದೆ.

ಬೆಳಗ್ಗೆ ಕಚೇರಿ ತೆರೆಯುತ್ತಲ್ಲೇ ಈ ಅವಘಡ ನಡೆದಿದ್ದು,ಎರಡು ಕಂಪ್ಯೂಟರ್ ಮತ್ತು ಸ್ಟೋರ್ ರೂಂನಲ್ಲಿಟ್ಟಿದ್ದ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಹಠಾತ್ ಬೆಂಕಿಯಿಂದಾಗಿ ಇಡೀ ಕಚೇರಿ ತುಂಬಾ ಹೊಗೆ ಆವರಿಸಿಕೊಂಡಿತ್ತು. 

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು.ಶಾರ್ಟ್ ಸರ್ಕ್ಯೂಟ್ ನಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಆದರೆ, ಯಾವುದೇ ಪ್ರಾಣಾಪಾಯವಾಗಿಲ್ಲ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com