ತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುತ್ತಿರುವ ಕುರಿತು ಟ್ವೀಟ್: ಐಎಎಸ್ ಅಧಿಕಾರಿ ಮೊಹ್ಸಿನ್ ಗೆ ಶೋಕಾಸ್ ನೋಟಿಸ್ ಜಾರಿ

ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿರುವ ತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುತ್ತಿರುವ ಕುರಿತು ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಕುರಿತು ವಿವರಣೆ ಕೇಳಿ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 
ಐಎಎಸ್ ಅಧಿಕಾರಿ ಮೊಹ್ಸಿನಿ
ಐಎಎಸ್ ಅಧಿಕಾರಿ ಮೊಹ್ಸಿನಿ

ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿರುವ ತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುತ್ತಿರುವ ಕುರಿತು ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಕುರಿತು ವಿವರಣೆ ಕೇಳಿ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಮಹಾಮಾರಿ ವೈರಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ತಬ್ಲಿಘಿ ಜಮಾತ್ ಸದಸ್ಯರು ಪ್ಲಾಸ್ಮಾ ದಾನ ಮಾಡುತ್ತಿದ್ದಾರೆಂದು ಮೊಹಮ್ಮದ್ ಮೊಹ್ಸಿನಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದರು. 

ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಇದೀಗ ಈ ಕುರಿತು ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಮೊಹ್ಸಿನಿಯವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com