ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ: ಸುರೇಶ್ ಕುಮಾರ್

ಕೊರೋನಾ  ಸಂಕಷ್ಟದ ಸಂದರ್ಭದಲ್ಲಿ ಕೆಲಸವಿಲ್ಲದೇ ಅತಂತ್ರರಾಗಿರುವ ಒಂದು ಸಾವಿರಕ್ಕೂ ಹೆಚ್ಚು  ಕಾರ್ಮಿಕರನ್ನು ಇಂದು ಸಚಿವ ಸುರೇಶ್ ಕುಮಾರ್ ಭೇಟಿ ಮಾಡಿದರು
ಕಾರ್ಮಿಕರೊಂದಿಗೆ ಸಚಿವ ಸುರೇಶ್ ಕುಮಾರ್ ಸಂವಾದದ ಚಿತ್ರ
ಕಾರ್ಮಿಕರೊಂದಿಗೆ ಸಚಿವ ಸುರೇಶ್ ಕುಮಾರ್ ಸಂವಾದದ ಚಿತ್ರ
Updated on: 

ಬೆಂಗಳೂರು: ಕೊರೋನಾ  ಸಂಕಷ್ಟದ ಸಂದರ್ಭದಲ್ಲಿ ಕೆಲಸವಿಲ್ಲದೇ ಅತಂತ್ರರಾಗಿರುವ ಒಂದು ಸಾವಿರಕ್ಕೂ ಹೆಚ್ಚು  ಕಾರ್ಮಿಕರನ್ನು ಇಂದು ಸಚಿವ ಸುರೇಶ್ ಕುಮಾರ್ ಭೇಟಿ ಮಾಡಿದರು

ಯಶವಂತಪುರದ ಎಪಿಎಂಸಿ  ಹಾಗೂ ಮಾಗಡಿ‌ ರಸ್ತೆಯ ಕಾವೇರಿಪುರ ಗುಡ್ಡದಲ್ಲಿ‌ ಬಹುವಸತಿ ಸಮುಚ್ಛಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಭೇಟಿ ಮಾಡಿದ ಸಚಿವರು,ಇಷ್ಟರಲ್ಲಿಯೇ ಬೆಂಗಳೂರು  ನಗರದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಬೃಹತ್ ನಿರ್ಮಾಣ ಚಟುವಟಿಕೆಗಳು  ಆರಂಭವಾಗಲಿದ್ದು, ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಕೆಲಸಗಳಲ್ಲಿ  ತೊಡಗಿಸಿಕೊಳ್ಳಬೇಕು ಎಂದರು. 

ಸರ್ಕಾರವು ತಮ್ಮೆಲ್ಲರ ಹಿತ ಕಾಯಲು ಸದಾ  ಬದ್ಧರಾಗಿರುವುದಾಗಿ ಹೇಳಿದ ಸಚಿವ ಸುರೇಶ್ ಕುಮಾರ್, ಕಟ್ಟಡ ಕಾರ್ಮಿಕರ ಮಾಲೀಕರೊಂದಿಗೆ  ಸ್ಥಳದಲ್ಲಿಯೇ ಮಾತನಾಡಿ ಎಲ್ಲಾ ಕಾರ್ಮಿಕರಿಗೆ ನೀಡಬೇಕಿರುವ ಬಾಕಿ‌ಯನ್ನ ಕೂಡಲೇ ನೀಡಲು  ಸೂಚಿಸಿದರಲ್ಲದೇ, ತಕ್ಷಣದಿಂದಲೇ ಕಾಮಗಾರಿಗಳು ಆರಂಭಿಸುವಂತೆ ಎಲ್ಲ ಪೂರ್ವಭಾವಿ  ಕ್ರಮಗಳಿಗೆ ಆಗ್ರಹಿಸಿದರು.

ಕಾರ್ಮಿಕರಿಗೆ ಆಹಾರ ಧಾನ್ಯಗಳನ್ನು ವಿತರಿಸಿ ಮಾತನಾಡಿದ ಸಚಿವರು, ಬೆಂಗಳೂರು ನಗರದ ಹಲವಾರು ಸ್ಥಳಗಳಲ್ಲಿ ಹೀಗೆ ಹಲವು ದಿನಗಳಿಂದ ನೆಲೆಸಿರುವ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳ ಸಾವಿರಾರು ಕೂಲಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಆತಂಕದಿಂದ ಸಿದ್ಧರಾಗುತ್ತಿದ್ದು, ಇವರು ಇಲ್ಲಿಯೇ ನೆಲೆಸುವಂತೆ ಸರ್ಕಾರದ ಪರವಾಗಿ ತಾವು ಖುದ್ದಾಗಿ ತೆರಳಿ ಮನವಿ ಮಾಡುತ್ತಿದ್ದು, ಇವರಿಗೆ ನಿರಂತರವಾದ ಕೆಲಸ ದೊರಕಿಸುವಲ್ಲಿ ಕ್ರಿಯಾ ಯೋಜನೆಯನ್ನು ರೂಪಿಸುವ ಬಗ್ಗೆ ತಾವು ಇಂದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು. 

ಸಚಿವರೊಂದಿಗೆ ಹಿರಿಯ ಐ ಎ ಎಸ್ ಅಧಿಕಾರಿ ಕುಮಾರ್ ನಾಯಕ್, ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com