ಮೈಸೂರು ಮೃಗಾಯಲಕ್ಕೆ ಸಚಿವ ಎಸ್.ಟಿ. ಸೋಮಶೇಖರ್ 1.19 ಕೋಟಿ ರೂ. ದೇಣಿಗೆ; ಸಹಾಯ ಮಾಡುವಂತೆ ಸುಧಾ ಮೂರ್ತಿಗೆ ಪತ್ರ

ಮೈಸೂರು ಮೃಗಾಲಯದ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾನು ಎಲ್ಲ ಸಚಿವರು, ವಿಧಾನಪರಿಷತ್ ಸದಸ್ಯರು ಹಾಗೂ ಶಾಸಕರು ಸೇರಿದಂತೆ ಸಮಾಜದ ಗಣ್ಯರು ಮತ್ತು ನಾಗರಿಕರಿಗೆ ಮನವಿ ಮಾಡಿ ಆರ್ಥಿಕ ಸಹಾಯ ಮಾಡುವಂತೆ ಈಗಾಗಲೇ ಕೋರಿದ್ದೇನೆ. 
ಸುಧಾ ಮೂರ್ತಿ
ಸುಧಾ ಮೂರ್ತಿ
Updated on

ಮೈಸೂರು: ಮೈಸೂರು ಮೃಗಾಲಯದ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾನು ಎಲ್ಲ ಸಚಿವರು, ವಿಧಾನಪರಿಷತ್ ಸದಸ್ಯರು ಹಾಗೂ ಶಾಸಕರು ಸೇರಿದಂತೆ ಸಮಾಜದ ಗಣ್ಯರು ಮತ್ತು ನಾಗರಿಕರಿಗೆ ಮನವಿ ಮಾಡಿ ಆರ್ಥಿಕ ಸಹಾಯ ಮಾಡುವಂತೆ ಈಗಾಗಲೇ ಕೋರಿದ್ದೇನೆ. 

ಅಲ್ಲದೆ, ನಾನು ಕ್ಷೇತ್ರದಿಂದ ಈಗ 2ನೇ ಬಾರಿ 45.30 ಲಕ್ಷ ರೂಪಾಯಿಯನ್ನು ಸಂಗ್ರಹಿಸಿ ಮೃಗಾಲಯಕ್ಕೆ ನೀಡುತ್ತಿದ್ದೇನೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ತಿಳಿಸಿದ್ದಾರೆ.

ಮೈಸೂರು ಜಯಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ ಸಚಿವರು, ತಮ್ಮ ಕ್ಷೇತ್ರದಿಂದ ಸಂಗ್ರಹಿಸಿದ 45.30 ಲಕ್ಷ ರೂಪಾಯಿ ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಸಚಿವರು ಹಸ್ತಾಂತರಿಸಿದರು. ಈ ಮೂಲಕ 2ನೇ ಬಾರಿ ಸಚಿವರು ಚೆಕ್ ಹಸ್ತಾಂತರ ಮಾಡಿದ್ದು, ಒಟ್ಟು 1 ಕೋಟಿ 18 ಲಕ್ಷ 90 ಸಾವಿರ ರೂಪಾಯಿಯನ್ನು ಮೃಗಾಲಯಕ್ಕೆ ಹಸ್ತಾಂತರ ಮಾಡಿದಂತಾಗಿದೆ. 

ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಮೃಗಾಲಯದ ಪ್ರಾಣಿಗಳು ಮತ್ತು ಪಕ್ಷಿಗಳಿಗೆ ಆಹಾರ ಮತ್ತು ಇನ್ನಿತರೆ ಸೌಲಭ್ಯಗಳಿಗೆ ಆರ್ಥಿಕ ಸಹಾಯವನ್ನು ಮಾಡಬೇಕು ಎಂದು ಎಸ್‌.ಟಿ.ಸೋಮಶೇಖರ್ ಅವರು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ನಾರಾಯಣಮೂರ್ತಿ ಅವರಿಗೆ ಪತ್ರ ಬರೆದಿದ್ದಾರೆ.

ಭಾರತ ದೇಶವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಮಾಡಲು ಶಿಕ್ಷಣ, ಸಾಮಾಜಿಕ, ಆರ್ಥಿಕ ಮತ್ತು ಧಾರ್ಮಿಕ ವಲಯಗಳ ಅಭಿವೃದ್ಧಿಗಾಗಿ ತಮ್ಮದೇ ಆದ ರೀತಿಯಲ್ಲಿ ಸಹಕಾರ ನೀಡುತ್ತಿದ್ದು, ಮುಖ್ಯವಾಗಿ ದೇಶದ ಆರ್ಥಿಕತೆಯ ಬೆಳವಣಿಗೆಗೆ ತಮ್ಮ ಸಂಸ್ಥೆಯು ಪ್ರತ್ಯಕ್ಷವಾಗಿ ಹಾಗು ಪರೋಕ್ಷವಾಗಿ ಲಕ್ಷಾಂತರ ಜನರಿಗೆ ಉದ್ಯೋಗ ಮತ್ತು ಅವಲಂಬಿತ ಕುಟುಂಬಗಳಿಗೆ ನಾರಾಯಣ ಮೂರ್ತಿ ಅವರು ಮತ್ತು ತಾವು ಆಸರೆಯಾಗಿದ್ದು, ತಾವುಗಳು ಭಗವಂತನ ಕೃಪೆಯಿಂದ ಮತ್ತಷ್ಟು ಹೆಚ್ಚಿನ ಸೇವೆ ಸಲ್ಲಿಸಲು ಆಯಸ್ಸು, ಆರೋಗ್ಯವನ್ನುಕರುಣಿಸಲೆಂದು ಪ್ರಾರ್ಥಿಸುತ್ತೇನೆ. ಇದಲ್ಲದೆ ತಾವು ದಿನದ 24 ಗಂಟೆಯ ಬಿಡುವಿಲ್ಲದೆ ಅಹರ್ನಿಶಿ ಜನಸೇವೆಯಲ್ಲಿ ತೊಡಗಿಸಿಕೊಂಡು ನಮ್ಮಂತವರಿಗೆ ಮಾದರಿಯಾಗಿದ್ದೀರಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ತಾವು ಇತ್ತೀಚೆಗೆ ಸುಮಾರು 125 ವರ್ಷಕ್ಕೂ ಹೆಚ್ಚು ಇತಿಹಾಸವನ್ನು ಹೊಂದಿರುವ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದೆ. ಮೃಗಾಲಯವು ಸ್ವಾಯತ್ತ ಸಂಸ್ಥೆಯಾಗಿದ್ದು, 2002ರಿಂದ ಸರ್ಕಾರದಿಂದ ಯಾವುದೇ ಆರ್ಥಿಕ ಸಹಾಯ ಪಡೆಯದೆ ವೀಕ್ಷಕರು ನೀಡುವ ಹಣದಿಂದಲೇ ಪ್ರಾಣಿಗಳ ಮತ್ತು ಪಕ್ಷಿಗಳ ಆಹಾರ, ಸಿಬ್ಬಂದಿ ವೇತನ ಹಾಗೂ ಮ್ರಗಾಲಯದ ನಿರ್ವಹಣೆಯನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com