ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳು ಮತ್ತೆ ಮುಂದೂಡಿಕೆ: ಯುಪಿಎಸ್ ಸಿ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹೇಳಿದೆ.

ಯುಪಿಎಸ್‌ಸಿ ಈ ವರ್ಷದ ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮತ್ತೆ ಮುಂದೂಡಿದೆ. ಈ  ಬಗ್ಗೆ ಯುಪಿಎಸ್‌ಸಿ ಅಧ್ಯಕ್ಷ ಅರವಿಂದ ಸಕ್ಸೇನಾ ಅವರ ಅಧ್ಯಕ್ಷತೆಯಲ್ಲಿ ಆಯೋಗದ ಸಭೆ ಸೋಮವಾರ ಜರುಗಿತು. ಕೇಂದ್ರ ಸರ್ಕಾರದಿಂದ ಮುಂದಿನ ಸೂಚನೆ ಬರುವವರೆಗೂ ಪರೀಕ್ಷೆಗಳನ್ನು ಮುಂದೂಡಲು ಸಭೆ ತೀರ್ಮಾನಿಸಿತು. ಈ ಮೊದಲು ಪರೀಕ್ಷೆಯನ್ನು ಮೇ 31 ರಂದು ನಡೆಸಲು ನಿರ್ಧರಿಸಲಾಗಿತ್ತು.

ಕೇಂದ್ರ ಸರ್ಕಾರ ಲಾಕ್‌ಡೌನ್ ಅನ್ನು ಮೇ 4 ರಿಂದ ಎರಡು ವಾರಗಳವರೆಗೆ ಮತ್ತೆ ವಿಸ್ತರಿಸಿದ ನಂತರ ಯುಪಿಎಸ್‌ಸಿ ಈ ನಿರ್ಧಾರ ಕೈಗೊಂಡಿದೆ. ಮೂಲಗಳ ಪ್ರಕಾರ ಮೇ 20 ರೊಳಗೆ ಲಾಕ್‌ಡೌನ್ ಮೌಲ್ಯಮಾಪನ ಮಾಡಿದ ನಂತರ ದಿನಾಂಕದಂದು ಪರೀಕ್ಷೆಗೆ ಕರೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ -19 ಹರಡುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ, ಅಂತಹ ದೊಡ್ಡ ಪ್ರಮಾಣದ ಪರೀಕ್ಷೆಯನ್ನು ನಡೆಸುವುದು ಕಾರ್ಯಸಾಧ್ಯವಲ್ಲ. ಪರೀಕ್ಷಾರ್ಥಿಗಳು ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಪರೀಕ್ಷೆ ಸಂಬಂಧ ಪರೀಕ್ಷಾರ್ಥಿಗಳಿಗೆ 30 ದಿನಗಳ ಮುಂಚಿತವಾಗಿಯೇ ಮಾಹಿತಿ ನೀಡಲಾಗುತ್ತದೆ ಎಂದು ಯುಪಿಎಸ್‌ಸಿ ತಿಳಿಸಿದೆ. ಆಯೋಗವು ಈ ವಾರ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಬೇಕಾಗಿತ್ತು, ಆದರೆ ಪ್ರಸ್ತುತ ಕೊರೋನಾ ಬಿಕ್ಕಟ್ಟಿನ ದೃಷ್ಟಿಯಿಂದ ಪರೀಕ್ಷಾ ಪ್ರಕ್ರಿಯೆಯನ್ನು ಮುಂದೂಡಲು ಆಯೋಗ ನಿರ್ಧರಿಸಿತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com