ಆಹಾರ ವಿತರಣೆಯಲ್ಲಿ ಬಿಜೆಪಿ ರಾಜಕೀಯ ವಿರೋಧಿಸಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಅಂಗನವಾಡಿ ಆಹಾರವನ್ನು ಅಕ್ರಮವಾಗಿ ಸಾಗಿಸುತ್ತಿರುವವರು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮ ಹೊಣೆ ಹೊತ್ತು ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ
ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ
Updated on

ಬೆಂಗಳೂರು: ಅಂಗನವಾಡಿ ಆಹಾರವನ್ನು ಅಕ್ರಮವಾಗಿ ಸಾಗಿಸುತ್ತಿರುವವರು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮ ಹೊಣೆ ಹೊತ್ತು ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

'ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಸಲ್ಲಬೇಕಾದ ಸರ್ಕಾರದ ಸೌಲಭ್ಯವಾದ ಸಕ್ಕರೆ, ಬೇಳೆ ಮುಂತಾದ ಆಹಾರ ಸಾಮಗ್ರಿಯನ್ನ ಬಿಜೆಪಿಗರು ಅಕ್ರಮವಾಗಿ ತಮ್ಮ ಚಿಹ್ನೆ, ಹೆಸರು ಮುದ್ರಿಸಿ ಹಂಚಿಕೆಗೆ ಸಾಗಿಸುತ್ತಿದ್ದಾರೆ' ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲೆಂದು ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಹೊರಟಿದ್ದ ಕಾರ್ಯಕರ್ತೆಯರನ್ನು ಶಿವಾನಂದ ವೃತ್ತದಲ್ಲೇ ಪೊಲೀಸರು ತಡೆದರು. ‘ಮಕ್ಕಳು, ಮಹಿಳೆಯರಿಗೆ ಸೇರಬೇಕಾದ ಆಹಾರವನ್ನು ದುರುಪಯೋಗಪಡಿಸಿಕೊಂಡ ಬಿಜೆಪಿ ಕಾರ್ಯಕರ್ತರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು
ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ರಾಜೀನಾಮೆ ನೀಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

‘ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಪ್ರತಿಭಟನೆ ನಡೆಸಬಾರದು’ ಎಂದು ಪೊಲೀಸರು ಮನವಿ ಮಾಡಿದರು. ಅದಕ್ಕೆ ಜಗ್ಗದ ಕಾರ್ಯಕರ್ತೆಯರು, ಮುಖ್ಯಮಂತ್ರಿ ಮನೆಯತ್ತ ಹೊರಡಲು ಮುಂದಾದರು. ಅದೇ ವೇಳೆಯೇ 20ಕ್ಕೂ ಹೆಚ್ಚು ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದರು. ಕೆಲ ಗಂಟೆಗಳ ಬಳಿಕ ಬಿಡುಗಡೆ ಮಾಡಿದರು.

ಕಾಂಗ್ರೆಸ್ ನಾಯಕರಿರುವ ವಿಧಾನಸಭೆ ಕ್ಷೇತ್ರಗಳಾದ ಚಾಮರಾಜಪೇಟೆ, ಬಿಟಿಎಂ ಲೇಔಟ್, ಜಯನಗರ, ವಿಜಯನಗರ ಗಳಲ್ಲಿ ಸರಿಯಾಗಿ ಆಹಾರ ಪದಾರ್ಥ ಹಂಚುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಶಾಸಕರಾದ ಎನ್‌ಎ ಹ್ಯಾರಿಸ್, ಜಮೀರ್ ಅಹ್ಮದ್ ಖಾನ್, ರಾಮಲಿಂಗ ರೆಡ್ಡಿ, ಸೌಮ್ಯಾ ರೆಡ್ಡಿ ಮತ್ತು ಎಂ ಕೃಷ್ಣಪ್ಪ ಎಲ್ಲರೂ ತಮ್ಮ ಸ್ವಂತ ಹಣ ಖರ್ಚು ಮಾಡಿ ಪಡಿತರ ಮತ್ತು ಆಹಾರ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ನಗರದ ಈ ನಾಲ್ಕು ಕ್ಷೇತ್ರಗಳಲ್ಲಿ ಸುಮಾರು 30,000-50,000 ಆಹಾರ ಪ್ಯಾಕೆಟ್‌ಗಳು ಮತ್ತು ಪಡಿತರ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು, ದೈನಂದಿನ ಕೂಲಿ ಕಾರ್ಮಿಕರು, ಆಟೋ ಚಾಲಕರು, ಗೃಹಿಣಿಯರು, ಎಲೆಕ್ಟ್ರಿಷಿಯನ್,ಸೇರಿದಂತೆ ಹಲವರಿಗೆ ಸಹಾಯವಾಗುತ್ತಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿಯರಾದ ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್, ಉಮಾಶ್ರಿ, ಜಯಮಾಲಾ, ರಾಣಿ ಸತೀಶ್, ಮೋಟಮ್ಮ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com