ಪಶು ಸಂಗೋಪನೆಯ ಆರ್.ಟಿ-ಪಿಸಿಆರ್ ಉಪಕರಣಗಳು ಕೋವಿಡ್-19 ಪತ್ತೆ ಉದ್ದೇಶಕ್ಕಾಗಿ ಹಸ್ತಾಂತರ-ಪ್ರಭು ಚವ್ಹಾಣ್

ರಾಜ್ಯದಲ್ಲಿ ಕೋವಿಡ್-19  ಸೊಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನ ಮಾಡುತ್ತಿದ್ದು ರೋಗ ಪತ್ತೆಗಾಗಿ ಬಳಸಲಾಗುವ ಆರ್.ಟಿ ಪಿಸಿಆರ್  (RT-PCR) ಉಪಕರಣಗಳನ್ನು ಆರೋಗ್ಯ ಇಲಾಖೆಗೆ ಒದಗಿಸಲಾಗುತ್ತಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಸಚಿವ ಪ್ರಭು ಚವ್ಹಾಣ್
ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19  ಸೊಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನ ಮಾಡುತ್ತಿದ್ದು ರೋಗ ಪತ್ತೆಗಾಗಿ ಬಳಸಲಾಗುವ ಆರ್.ಟಿ ಪಿಸಿಆರ್  (RT-PCR) ಉಪಕರಣಗಳನ್ನು ಆರೋಗ್ಯ ಇಲಾಖೆಗೆ ಒದಗಿಸಲಾಗುತ್ತಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಶುಸಂಗೋಪನೆ ಇಲಾಖೆ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯಗಳ ಲ್ಯಾಬ್ ಗಳಲ್ಲಿ ಈ ಉಪಕರಣಗಳು ಲಭ್ಯವಿದ್ದು,ಇವುಗಳನ್ನು ಸಂಕಷ್ಟದ ಪರಿಸ್ಥಿತಿಯಲ್ಲಿ ಬಳಸಿಕೊಳ್ಳಲು ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿತ್ತು.

ಸದ್ಯ ಈ ಉಪಕರಣಗಳನ್ನು ಕೊವಿಡ್-೧೯ ಪತ್ತೆಗೆ ಬಳಸಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ಸೋಂಕು ಪತ್ತೆಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು  ತಿಳಿಸಿದ್ದಾರೆ.

 ರೋಗ ಪತ್ತೆ ಹಚ್ಚುವಲ್ಲಿ ಲ್ಯಾಬ್ ಗಳ ಪಾತ್ರ ಪ್ರಮುಖವಾಗಿದ್ದು, ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿದ್ದ ೨  ಆರ್.ಟಿ ಪಿಸಿಆರ್  ಉಪಕರಣಗಳು ಆರೋಗ್ಯ ಇಲಾಖೆಯ ಲ್ಯಾಬ್ ಗಳಿಗೆ  ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಭು ಚವ್ಹಾಣ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com