ಕೊರೋನಾ ಮಹಾಮಾರಿ: ರಾಜ್ಯದಲ್ಲಿ ಇಂದು ಹೊಸದಾಗಿ 12 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ!

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 12 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ.
ಈ ನಡುವೆ ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಸರ್ಕಾರ ಹೊರಡಿಸಿದ ಬುಲೆಟಿನ್ ನಲ್ಲಿರುವಂತೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದ್ದು, ಈ ಪೈಕಿ 30 ಮಂದಿ ಸಾವನ್ನಪ್ಪಿದ್ದರೆ, 366 ಮಂದಿ ಗುಣಮುಖರಾಗಿದ್ದಾರೆ.
ಬೆಳಗ್ಗೆ 8 ಪ್ರಕರಣಗಳು ಪತ್ತೆಯಾಗಿದ್ದವು. ದಾವಣಗೆರೆಯಲ್ಲಿ ಇಂದು ಮೃತಪಟ್ಟ 55 ವರ್ಷದ ಮಹಿಳೆ, ಜ್ವರದ ಲಕ್ಷಣಗಳನ್ನು ಹೊಂದಿದ್ದ 53 ಹಾಗೂ 40 ವರ್ಷದ ಮಹಿಳೆಯರು, ಕಲಬುರಗಿಯಲ್ಲಿ ಸೋಂಕಿತರ ಸಂಪರ್ಕ ಹೊಂದಿದ್ದ 35 ಹಾಗೂ 36 ವರ್ಷದ ವ್ಯಕ್ತಿಗಳು, ಬೆಳಗಾವಿಯ ಹಿರೇಬಾಗೇವಾಡಿಯ 13 ವರ್ಷದ ಬಾಲಕಿ, ಬೆಂಗಳೂರು ನಗರದ 49 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.
ಸಂಜೆ ವೇಳೆಗೆ ಹೊಸದಾಗಿ 4 ಪ್ರಕರಣಗಳು ಪತ್ತೆಯಾಗಿದ್ದು ಬಾಗಲಕೋಟೆಯಲ್ಲಿ 3 ಮತ್ತು ಧಾರವಾಡದಲ್ಲಿ 1 ಪ್ರಕರಣ ಪತ್ತೆಯಾಗಿದೆ.
ಬಾಗಲಕೋಟೆಯ ಬಾದಾಮಿಯ ಗರ್ಭಿಣಿ ಮಹಿಳೆಯ ಸೋಂಕಿನಿಂದ ಮತ್ತೆ ಮೂವರಿಗೆ ಸೋಂಕು ತಗುಲಿದೆ. ಒಂದೇ ಗ್ರಾಮದ 80 ವರ್ಷದ ವೃದ್ಧೆ, 55 ವರ್ಷದ ಮಹಿಳೆ ಮತ್ತು 19 ವರ್ಷದ ಯುವತಿಗೆ ಸೋಂಕು ದೃಢಪಟ್ಟಿದೆ. ಧಾರವಾಡದ 35 ವರ್ಷದ ವ್ಯಕ್ತಿಗೆ ಕೂಡ ಸೋಂಕು ತಗಲಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


